

ಅಮೆರಿಕದ ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅವರ ಪತ್ನಿ ಅಮೆರಿಕದ ಮೊದಲ ಮಹಿಳೆ ಮೆಲಾನಿಯಾ ಟ್ರಂಪ್ ಮತ್ತು ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರನ್ನು ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ಸದ್ದು ಕೇಳಿಬಂದು ವೈಟ್ ಹೌಸ್ ವರದಿಗಾರರ ಔತಣಕೂಟದಿಂದ ತುರ್ತಾಗಿ ಹೊರಗೆ ಸ್ಥಳಾಂತರಿಸಿದ ಘಟನೆ ನಡೆಯಿತು.
ಕಾರ್ಯಕ್ರಮದಿಂದ ಡೊನಾಲ್ಡ್ ಟ್ರಂಪ್ ಅವರನ್ನು ಸ್ಥಳಾಂತರಿಸಿದ ಸುಮಾರು ಒಂದು ಗಂಟೆಯ ಬಳಿಕ, ಅವರು ಟ್ರೂತ್ ಸೋಶಿಯಲ್‌ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸೀಕ್ರೆಟ್ ಸರ್ವಿಸ್ ಮತ್ತು ಕಾನೂನು ಜಾರಿಗೆ ಸಂಬಂಧಿಸಿದ ಅಧಿಕಾರಿಗಳು ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಹಂಚಲಾದ ವಿಡಿಯೊದಲ್ಲಿ, ಟ್ರಂಪ್ ಮತ್ತು ಅವರ ಪತ್ನಿ ವೇದಿಕೆಯ ಹಿಂದೆ ತಲೆಬಾಗಿರುವುದು ಕಾಣುತ್ತದೆ, ನಂತರ ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ಅವರನ್ನು ಸುರಕ್ಷಿತವಾಗಿ ಹೊರಗಡೆ ಕರೆದುಕೊಂಡು ಹೋಗುತ್ತಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 2,600 ಜನರು ಭಾಗವಹಿಸಿದ್ದರು.
ಔತಣಕೂಟದ ಅತಿಥಿಯೇ ದಾಳಿಕೋರ
ವೈಟ್ ಹೌಸ್ ವರದಿಗಾರರ ಭೋಜನದ ಗುಂಡಿನ ದಾಳಿಕೋರನು ಅತಿಥಿ ಆಗಿದ್ದಾನೆ ಎಂದು ವಾಷಿಂಗ್ಟನ್ ಡಿಸಿ ಪೊಲೀಸ್ ಮುಖ್ಯಸ್ಥ ಜೆಫ್ರಿ ಕ್ಯಾರೋಲ್ ತಿಳಿಸಿದ್ದಾರೆ. ಹೋಟೆಲ್‌ನಲ್ಲಿ ನಾವು ಒಂದು ಸುರಕ್ಷಿತ ಕೊಠಡಿಯನ್ನು ಹೊಂದಿದ್ದೇವೆ. ಅದರೊಳಗೆ ಏನಿತ್ತು ಎಂಬುದನ್ನು ತಿಳಿಯಲು ನಾವು ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಸಂದೇಹಿತನ ಮೇಲೆ ಎರಡು ಅಪರಾಧ ಪ್ರಕರಣಗಳನ್ನು ದಾಖಲಿಸಲಾಗಿದೆ — ಹಿಂಸಾತ್ಮಕ ಅಪರಾಧದ ವೇಳೆ ಶಸ್ತ್ರಾಸ್ತ್ರ ಬಳಕೆ ಮತ್ತು ಅಪಾಯಕಾರಿ ಆಯುಧ ಬಳಸಿ ಫೆಡರಲ್ ಅಧಿಕಾರಿಯ ಮೇಲೆ ದಾಳಿ ಆರೋಪಗಳಾಗಿವೆ.
ವಾಷಿಂಗ್ಟನ್‌ನಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಟ್ರಂಪ್ ಅವರು ಒಂದು ವಿಡಿಯೊ ಹಂಚಿಕೊಂಡಿದ್ದು, ಅದರಲ್ಲಿ ಶಂಕಿತ ವ್ಯಕ್ತಿ ಭೋಜನ ನಡೆಯುತ್ತಿದ್ದ ಸ್ಥಳದತ್ತ ಓಡುತ್ತಿರುವುದು ಕಾಣಿಸುತ್ತದೆ. ವಿಡಿಯೊದಲ್ಲಿ ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ತಮ್ಮ ಸೀಟುಗಳತ್ತ ಧಾವಿಸಿ ಶಂಕಿತನತ್ತ ಗನ್ ತೋರಿಸುತ್ತಿರುವುದು ಕೂಡ ಕಾಣಿಸುತ್ತದೆ.
ಶಂಕಿತನ ಫೋಟೋ ಬಿಡುಗಡೆ
ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿ ವೇಳೆ ಗುಂಡಿನ ದಾಳಿ ನಡೆಸಿದ್ದ ಆರೋಪಿಯ ಫೋಟೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಿಡುಗಡೆ ಮಾಡಿದ್ದಾರೆ. ನೂರಾರು ಅತಿಥಿಗಳು ಸೇರಿದ್ದ ಹೋಟೆಲ್‌ನ ಬಾಲ್ ರೂಂನ ಹೊರಗಿನ ಸ್ಕ್ರೀನಿಂಗ್ ಪ್ರದೇಶದಲ್ಲಿ ಬಂದೂಕುಧಾರಿಯನ್ನು ಬಂಧಿಸಲಾಗಿದೆ.
ಟ್ರಂಪ್ ಅವರನ್ನು ವೇದಿಕೆಯಿಂದ ಕೆಳಗಿಳಿಸಲಾಯಿತು. ಶ್ವೇತಭವನದ ವರದಿಗಾರರ ಭೋಜನ ಕೂಟದಿಂದ ಶಂಕಿತ ಶೂಟರ್‌ನ ಮೊದಲ ಚಿತ್ರ ಹೊರಬಂದಿದ್ದು, ವಾಷಿಂಗ್ಟನ್ ಹಿಲ್ಟನ್‌ನ ಮೆಟ್ಟಿಲುಗಳ ಬಳಿ ಕಾನೂನು ಜಾರಿ ಸಂಸ್ಥೆಗಳು ಆತನನ್ನು ಬಂಧಿಸಿರುವುದನ್ನು ತೋರಿಸುತ್ತದೆ. ಶಂಕಿತ ಶೂಟರ್ ನ್ನು ಕ್ಯಾಲಿಫೋರ್ನಿಯಾದ ಟೊರೆನ್ಸ್‌ನ 31 ವರ್ಷದ ಕೋಲ್ ತೋಮಸ್ ಅಲೆನ್ ಎಂದು ಗುರುತಿಸಲಾಗಿದೆ.
Advertisement