ಇರಾನ್ ಮಾತುಕತೆಗಳಿಗೆ ರಾಯಭಾರಿಗಳನ್ನು ಕಳುಹಿಸುವುದನ್ನು ರದ್ದುಗೊಳಿಸಿದ್ದೇನೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಅಮೆರಿಕ ತನ್ನ ಬಂದರುಗಳ ಮೇಲಿನ ದಿಗ್ಬಂಧನವನ್ನು ತೆರವುಗೊಳಿಸದ ಹೊರತು ತಮ್ಮ ದೇಶ ಮಾತುಕತೆ ನಡೆಸುವುದಿಲ್ಲ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಹೇಳಿದ್ದಾರೆ.
Donald Trump
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
Updated on

ದುಬೈ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಉನ್ನತ ರಾಯಭಾರಿಗಳಾದ ಸ್ಟೀವ್ ವಿಟ್ಕಾಫ್ ಮತ್ತು ಜೇರೆಡ್ ಕುಶ್ನರ್ ಅವರಿಗೆ ಇರಾನ್ ಜೊತೆ ಮಾತುಕತೆ ನಡೆಸಲು ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ತಿಳಿಸಿದ್ದೇನೆ ಮತ್ತು 'ಅವರು (ಇರಾನ್) ಯಾವಾಗ ಬೇಕಾದರೂ ನಮಗೆ ಕರೆ ಮಾಡಬಹುದು' ಎಂದು ಫಾಕ್ಸ್ ನ್ಯೂಸ್‌ನಲ್ಲಿ ತಿಳಿಸಿದ್ದಾರೆ.

ಅಮೆರಿಕ ತನ್ನ ಬಂದರುಗಳ ಮೇಲಿನ ದಿಗ್ಬಂಧನವನ್ನು ತೆರವುಗೊಳಿಸದ ಹೊರತು ತಮ್ಮ ದೇಶ ಮಾತುಕತೆ ನಡೆಸುವುದಿಲ್ಲ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಹೇಳಿದ್ದಾರೆ.

ಶನಿವಾರ ರಾತ್ರಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ದೂರವಾಣಿ ಕರೆ ಮಾಡಿದ ಪೆಜೆಶ್ಕಿಯಾನ್, ಅಮೆರಿಕವು 'ಮೊದಲು ದಿಗ್ಬಂಧನ ಸೇರಿದಂತೆ ಇತರ ಕಾರ್ಯಾಚರಣೆಯ ಅಡೆತಡೆಗಳನ್ನು ತೆಗೆದುಹಾಕಬೇಕು' ನಂತರವೇ ಹೊಸ ಸುತ್ತಿನ ಮಾತುಕತೆಗೆ ಅವಕಾಶ ನೀಡಬೇಕು ಎಂದು ಇರಾನ್‌ನ ಐಎಸ್‌ಎನ್‌ಎ ಮತ್ತು ತಸ್ನಿಮ್ ಸುದ್ದಿ ಸಂಸ್ಥೆಗಳು ತಿಳಿಸಿವೆ.

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಶನಿವಾರ ಸಂಜೆ ಪಾಕಿಸ್ತಾನವನ್ನು ತೊರೆದಿದ್ದಾರೆ ಎಂದು ಇಬ್ಬರು ಪಾಕಿಸ್ತಾನಿ ಅಧಿಕಾರಿಗಳು ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದಾರೆ.

ಇರಾನ್‌ನ ಸರ್ಕಾರಿ ಸ್ವಾಮ್ಯದ ಐಆರ್‌ಎನ್‌ಎ ಸುದ್ದಿ ಸಂಸ್ಥೆ ಅರಘ್ಚಿ ಭಾನುವಾರ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಿಂದ ಹಿಂತಿರುಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

Donald Trump
ಪಾಕಿಸ್ತಾನ ನೆಲದಲ್ಲೂ ಅಮೆರಿಕಕ್ಕೆ ಮುಖಭಂಗ: Trump ಪ್ರತಿನಿಧಿಗಳ ಭೇಟಿಯಾಗದೇ ಹೊರಟ Iran ನಿಯೋಗ!

ಶ್ವೇತಭವನದಲ್ಲಿ ನಡೆದ ಮಾತುಕತೆಯ ನಂತರ ಇಸ್ರೇಲ್ ಮತ್ತು ಲೆಬನಾನ್, ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಕದನ ವಿರಾಮವನ್ನು ಮೂರು ವಾರಗಳವರೆಗೆ ವಿಸ್ತರಿಸಲು ಒಪ್ಪಿಕೊಂಡಿವೆ ಎಂದು ಟ್ರಂಪ್ ಗುರುವಾರ ಹೇಳಿದ್ದಾರೆ.

ಈ ತಿಂಗಳು ಎರಡೂ ದೇಶಗಳ ನಡುವಿನ ಎರಡನೇ ಉನ್ನತ ಮಟ್ಟದ ಮಾತುಕತೆ ಇದಾಗಿತ್ತು. ಆರಂಭಿಕ 10 ದಿನಗಳ ಕದನ ವಿರಾಮ ಸೋಮವಾರ ಮುಕ್ತಾಯಗೊಳ್ಳಬೇಕಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com