Donald Trump
ಡೊನಾಲ್ಡ್ ಟ್ರಂಪ್

ಇರಾನ್ ಬದಲಿಗೆ ಭಾರತ ವೆನೆಜುವೆಲಾದಿಂದ ತೈಲ ಖರೀದಿಸಲಿದೆ: ಡೊನಾಲ್ಡ್ ಟ್ರಂಪ್

2019 ರವರೆಗೆ ಭಾರತ ಇರಾನ್ ತೈಲದ ಪ್ರಮುಖ ಖರೀದಿದಾರನಾಗಿತ್ತು. ಟೆಹ್ರಾನ್ ಮೇಲೆ ಅಮೆರಿಕ ಮತ್ತೆ ನಿರ್ಬಂಧಗಳನ್ನು ಹೇರಿದ ನಂತರ ಆಮದು ಗಮನಾರ್ಹವಾಗಿ ಕಡಿಮೆಯಾಯಿತು.
Published on

ನ್ಯೂಯಾರ್ಕ್: ಭಾರತವು ಇರಾನ್ ಬದಲಿಗೆ ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ.

ಫ್ಲೋರಿಡಾದ ಪಾಮ್ ಬೀಚ್‌ಗೆ ತೆರಳುವಾಗ ಏರ್ ಫೋರ್ಸ್ ಒನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ತೈಲ ಪೂರೈಕೆಗೆ ಬದಲಾಗಿ ಚೀನಾ ವೆನೆಜುವೆಲಾಕ್ಕೆ ಸಾಲವಾಗಿ ನೀಡಿದ್ದ ಹಣವನ್ನು ಮರುಪಡೆಯುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಈ ಹೇಳಿಕೆ ನೀಡಿದ್ದಾರೆ.

'ಭಾರತ ವೆನೆಜುವೆಲಾದಿಂದ ತೈಲ ಖರೀದಿಸಲು ಒಪ್ಪಿಕೊಂಡಿರುವುದು ಉತ್ತಮ ನಡೆ. ಚೀನಾ ಕೂಡ ಇದನ್ನು ಒಪ್ಪಿಕೊಂಡಿದೆ. ಚೀನಾ ಮತ್ತು ಭಾರತದ ನಡೆ ಸ್ವಾಗತಾರ್ಹ. ಭಾರತವು ಇರಾನಿನ ತೈಲದ ಬದಲು ವೆನೆಜುವೆಲಾದಿಂದ ತೈಲ ಖರೀದಿಗೆ ಈಗಾಗಲೇ ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಇದು ವೆನೆಜುವೆಲಾಗೆ ಪ್ರಯೋಜನಕಾರಿ ಮತ್ತು ಇರಾನ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಕಾರ್ಯತಂತ್ರದ ಒಪ್ಪಂದ' ಎಂದರು.

ಟ್ರಂಪ್ ಅವರ ಹೇಳಿಕೆಗಳಿಗೆ ನವದೆಹಲಿಯಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

2019 ರವರೆಗೆ ಭಾರತ ಇರಾನ್ ತೈಲದ ಪ್ರಮುಖ ಖರೀದಿದಾರನಾಗಿತ್ತು. ಟೆಹ್ರಾನ್ ಮೇಲೆ ಅಮೆರಿಕ ಮತ್ತೆ ನಿರ್ಬಂಧಗಳನ್ನು ಹೇರಿದ ನಂತರ ಆಮದು ಗಮನಾರ್ಹವಾಗಿ ಕಡಿಮೆಯಾಯಿತು.

Donald Trump
'ತುಂಬಾ ಆದೇಶ ಕೊಟ್ಟಿದ್ದೀರಿ.. ಇನ್ನು ಸಾಕು..': ಅಮೆರಿಕಕ್ಕೆ ವೆನೆಜುವೆಲಾ ಖಡಕ್ ವಾರ್ನಿಂಗ್!

ಇರಾನ್ ಮತ್ತು ವೆನೆಜುವೆಲಾ ಮೇಲಿನ ಅಸ್ತಿತ್ವದಲ್ಲಿರುವ ಅಮೆರಿಕದ ನಿರ್ಬಂಧಗಳ ಅಡಿಯಲ್ಲಿ ತೈಲ ಆಮದು ಮಾಡಿಕೊಳ್ಳುವ ಪ್ರಮುಖ ದೇಶಗಳು ನಿರ್ಬಂಧಿತ ರಾಷ್ಟ್ರಗಳಿಂದ ತೈಲ ಖರೀದಿಸುವುದನ್ನು ನಿಲ್ಲಿಸುವಂತೆ ಒತ್ತಾಯಿಸುವ ಅಮೆರಿಕದ ಪ್ರಯತ್ನಗಳ ಹಿನ್ನೆಲೆಯಲ್ಲಿ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ಭಾರತವು ರಿಯಾಯಿತಿ ದರದಲ್ಲಿ ರಷ್ಯಾದಿಂದ ಕಚ್ಚಾ ತೈಲ ಖರೀದಿಯನ್ನು ಗಣನೀಯವಾಗಿ ಹೆಚ್ಚಿಸಿದೆ. ಇದರಿಂದಾಗಿ ರಷ್ಯಾ ಭಾರತದ ಅತಿದೊಡ್ಡ ತೈಲ ಪೂರೈಕೆದಾರರಲ್ಲಿ ಒಂದಾಗಿದೆ.

ರಷ್ಯಾದಿಂದ ತೈಲ ಖರೀದಿಯನ್ನು ಗುರಿಯಾಗಿಸಿಕೊಂಡು ಶೇ 25 ಸೇರಿದಂತೆ ಅಮೆರಿಕ ಭಾರತದ ಮೇಲೆ ಶೇ 50 ರಷ್ಟು ಸುಂಕ ವಿಧಿಸಿದೆ. ಇದು ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿರುತ್ಸಾಹಗೊಳಿಸುವ ಗುರಿಯನ್ನು ಹೊಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಮತ್ತು ವಿಸ್ತರಿಸಲು ಒಪ್ಪಿಕೊಂಡರು.

ವ್ಯಾಪಾರ ಮತ್ತು ಹೂಡಿಕೆ, ಇಂಧನ, ಡಿಜಿಟಲ್ ತಂತ್ರಜ್ಞಾನ, ಆರೋಗ್ಯ, ಕೃಷಿ ಮತ್ತು ಜನರಿಂದ ಜನರ ನಡುವಿನ ಸಂಬಂಧಗಳು ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಭಾರತ-ವೆನೆಜುವೆಲಾ ಪಾಲುದಾರಿಕೆಯನ್ನು ಮತ್ತಷ್ಟು ವಿಸ್ತರಿಸಲು ಮತ್ತು ಆಳಗೊಳಿಸಲು ಇಬ್ಬರೂ ನಾಯಕರು ಒಪ್ಪಿಕೊಂಡರು ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com