ವಿವಿಧ ದೇಶಗಳ ಮೇಲೆ ಟ್ರಂಪ್ ವಿಧಿಸಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕ ಸುಪ್ರೀಂ ಕೋರ್ಟ್

ಟ್ರಂಪ್, ಅಂತರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ ಬಳಸಿಕೊಂಡು ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಮೇಲೆ ಮನಬಂದಂತೆ ಸುಂಕ ವಿಧಿಸಿದ್ದರು.
Donald Trump
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್JUSTIN LANE
Updated on

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಶುಕ್ರವಾರ ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ ಟ್ರಂಪ್ ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದಾರೆ ಎಂದು ಹೇಳಿದೆ.

ಟ್ರಂಪ್, ಅಂತರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ ಬಳಸಿಕೊಂಡು ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಮೇಲೆ ಮನಬಂದಂತೆ ಸುಂಕ ವಿಧಿಸಿದ್ದರು.

ಇದೀಗ ಅಮೆರಿಕ ಸುಪ್ರೀಂ ಕೋರ್ಟ್ ಸಂಪುಟ​​ ಒಪ್ಪಿಗೆಯಿಲ್ಲದೆ ಜಾಗತಿಕ ಸುಂಕಗಳನ್ನು ವಿಧಿಸುವ ಅಧಿಕಾರವಿಲ್ಲ ಎನ್ನುವ ಮೂಲಕ ಟ್ರಂಪ್​ಗೆ ದೊಡ್ಡ ಶಾಕ್ ನೀಡಿದೆ.

Donald Trump
ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಟ್ರಂಪ್ ದಿಢೀರ್ ಯೂ-ಟರ್ನ್: ಯುರೋಪಿನ 8 ರಾಷ್ಟ್ರಗಳ ಮೇಲೆ ಶೇ.10ರಷ್ಟು ಸುಂಕ ವಿಧಿಸದಿರಲು ನಿರ್ಧಾರ..!

ಆರು-ಮೂರು ನ್ಯಾಯಮೂರ್ತಿಗಳ ಬೆಂಬಲದ ತೀರ್ಪಿನಲ್ಲಿ. ಅಂತರರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ (IEEPA "ಅಧ್ಯಕ್ಷರಿಗೆ ಸುಂಕಗಳನ್ನು ವಿಧಿಸಲು ಅಧಿಕಾರ ನೀಡುವುದಿಲ್ಲ" ಎಂದು ಹೇಳಿದೆ.

ಐಇಇಪಿಎ ಅಡಿಯಲ್ಲಿ ಟ್ರಂಪ್ ವಿಧಿಸಿರುವ ಸುಂಕಗಳು ಕಾನೂನುಬಾಹಿರವೆಂದು ಈ ಹಿಂದೆ ಕೆಳ ನ್ಯಾಯಾಲಯ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ.

ಟ್ರಂಪ್ ತಮ್ಮ ಅಧಿಕಾರವನ್ನು ವ್ಯಾಪ್ತಿಯನ್ನು ಮೀರಿ ವ್ಯಾಪಕ ಸುಂಕಗಳನ್ನು ವಿಧಿಸಿದ್ದಾರೆ ಮತ್ತು ಅವುಗಳಲ್ಲಿ ಹೆಚ್ಚಿನವು ಜಾರಿಗೆ ಬರದಂತೆ ತಡೆಹಿಡಿದಿದ್ದಾರೆ ಎಂದು ಕೆಳ ವ್ಯಾಪಾರ ನ್ಯಾಯಾಲಯವು ಮೇ ತಿಂಗಳಲ್ಲಿ ತೀರ್ಪು ನೀಡಿತ್ತು. ಆದರೆ ಸರ್ಕಾರವು ಮೇಲ್ಮನವಿ ಸಲ್ಲಿಸಲು ಅವಕಾಶ ಕೋರಿದ್ದರಿಂದ ಆ ತೀರ್ಪನ್ನು ತಡೆಹಿಡಿಯಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com