ಇರಾನ್ ವಿರುದ್ಧ ಕ್ಷಿಪಣಿ ದಾಳಿ: ಇಸ್ರೇಲ್, ಜೋರ್ಡಾನ್‌ ನಲ್ಲಿರುವ ಭಾರತೀಯ ಪ್ರಜೆಗಳಿಗೆ ಸೂಚನೆ!

ಜೋರ್ಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳು ಮತ್ತು ಪ್ರವಾಸಿಗರಿಗೆ ಮುನ್ನೆಚ್ಚರಿಕೆ ವಹಿಸಲು, ಸುರಕ್ಷಿತವಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ನೀಡುವ ಸಲಹೆಗಳನ್ನು ಪಾಲಿಸಲು ಕರೆ ನೀಡಿದೆ.
ಇರಾನ್ ವಿರುದ್ಧ ಕ್ಷಿಪಣಿ ದಾಳಿ ಆರಂಭಿಸಿದ ಇಸ್ರೇಲ್
ಇರಾನ್ ವಿರುದ್ಧ ಕ್ಷಿಪಣಿ ದಾಳಿ ಆರಂಭಿಸಿದ ಇಸ್ರೇಲ್
Updated on

ಜೋರ್ಡಾನ್: ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತ ಶನಿವಾರ ಇಸ್ರೇಲ್ ಮತ್ತು ಜೋರ್ಡಾನ್‌ನಲ್ಲಿರುವ ತನ್ನ ಪ್ರಜೆಗಳಿಗೆ ಸಲಹೆಗಳನ್ನು ನೀಡಿದ್ದು, ಅವರು ಅತ್ಯಂತ ಜಾಗರೂಕತೆಯಿಂದ ಇರುವಂತೆ ಸೂಚಿಸಲಾಗಿದೆ.

ಇಸ್ರೇಲಿ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ನೀಡಿದ ಸುರಕ್ಷತಾ ಮಾರ್ಗಸೂಚಿಗಳು ಮತ್ತು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಇಸ್ರೇಲ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಸಲಹೆ ನೀಡಿದೆ.

ಜೋರ್ಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳು ಮತ್ತು ಪ್ರವಾಸಿಗರಿಗೆ ಮುನ್ನೆಚ್ಚರಿಕೆ ವಹಿಸಲು, ಸುರಕ್ಷಿತವಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ನೀಡುವ ಸಲಹೆಗಳನ್ನು ಪಾಲಿಸಲು ಕರೆ ನೀಡಿದೆ.

ಇರಾನ್ ವಿರುದ್ಧ ಕ್ಷಿಪಣಿ ದಾಳಿ ಆರಂಭಿಸಿದ ಇಸ್ರೇಲ್
ಇರಾನ್ ಮೇಲೆ ಇಸ್ರೇಲ್ ದಾಳಿ: ರಾಜಧಾನಿ ಟೆಹ್ರಾನ್ ನಲ್ಲಿ IDF ಮಿಸೈಲ್ ಸ್ಟ್ರೈಕ್, ತುರ್ತು ಪರಿಸ್ಥಿತಿ ಘೋಷಣೆ! Video

ವಾಣಿಜ್ಯ ವಿಮಾನ ಕಾರ್ಯಾಚರಣೆಗೆ ಅಡ್ಡಿಯಾಗುವ ಮುನ್ನವೇ ದೇಶವನ್ನು ತೊರೆಯುವಂತೆ ಜೋರ್ಡಾನ್‌ನಲ್ಲಿರುವ ಭಾರತೀಯ ಪ್ರವಾಸಿಗರಿಗೆ ಸಲಹೆ ನೀಡಿದೆ.

ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿರುವವರು 00962-770 422 276 ಸಹಾಯವಾಣಿ ಸಂಪರ್ಕಿಸಬಹುದು ಎಂದು ಜೋರ್ಡಾನ್‌ನಲ್ಲಿರುವ ರಾಯಭಾರ ಕಚೇರಿ ತಿಳಿಸಿದೆ. ಇಸ್ರೇಲ್ ಶನಿವಾರ ಇರಾನ್ ವಿರುದ್ಧ ಕ್ಷಿಪಣಿ ದಾಳಿ' ಆರಂಭಿಸಿದ ನಂತರ ಈ ಸಲಹೆ ಬಂದಿದೆ.

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com