Switzerlandನ ಕ್ರಾನ್ಸ್–ಮಾಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಭಾರೀ ಸ್ಫೋಟ: ಹಲವರು ಸಾವು
ಕ್ರಾನ್ಸ್–ಮೊಂಟಾನಾ (ಸ್ವಿಟ್ಜರ್‌ಲ್ಯಾಂಡ್): ಸ್ವಿಟ್ಜರ್‌ಲ್ಯಾಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದ ಬಾರ್ ವೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವರ ಸಾವು-ನೋವು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ಕಿಕ್ಕಿರಿದಿದ್ದ ‘ಲೆ ಕಾನ್ಸ್ಟೆಲೇಷನ್’ ಬಾರ್‌ನಲ್ಲಿ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸ್ಫೋಟ ಸಂಭವಿಸಿದೆ.
ನೈಋತ್ಯ ಸ್ವಿಟ್ಜರ್‌ಲ್ಯಾಂಡ್ ನ ವಾಲಿಸ್ ಕ್ಯಾಂಟನ್ ನ ಪೊಲೀಸ್ ವಕ್ತಾರ ಗೇಟನ್ ಲಾಥಿಯನ್ ಈ ಕುರಿತು ಪ್ರತಿಕ್ರಿಯಿಸಿ, ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಹಲವರು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಆಂಬ್ಯುಲೆನ್ಸ್‌ಗಳು ಹಾಗೂ ಇತರೆ ತುರ್ತು ಸೇವೆಗಳು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ.
ಸ್ಥಳೀಯ ಮಾಧ್ಯಮಗಳು ಪ್ರಕಟಿಸಿದ ಚಿತ್ರಗಳಲ್ಲಿ ಸ್ಫೋಟ ಸಂಭವಿಸಿದ ಕಟ್ಟಡ ಬೆಂಕಿಗಾಹುತಿಯಾಗಿರುವುದು ಕಂಡುಬಂದಿದೆ. ಸ್ಫೋಟದ ಕಾರಣ ಮತ್ತು ಹಿನ್ನೆಲೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸಾವು-ನೋವಿನ ಕುರಿತು ನಿಖರತೆಗಳು ಇನ್ನೂ ಖಚಿತವಾಗಿಲ್ಲ.

