

ವಾಷಿಂಗ್ಟನ್: ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರ ಓಹಿಯೋ ಮನೆಯ ಮೇಲೆ ನಡೆದ ದಾಳಿ ನಡೆದಿದ್ದು ದೇಶಾದ್ಯಂತ ಆತಂಕ ಸೃಷ್ಟಿಸಿದೆ. ವಿಲಿಯಂ ಹೊವಾರ್ಡ್ ಟಾಫ್ಟ್ ಡ್ರೈವ್‌ನಲ್ಲಿರುವ ಈಸ್ಟ್ ವಾಲ್ನಟ್ ಹಿಲ್ಸ್ ಪ್ರದೇಶದಲ್ಲಿರುವ ವ್ಯಾನ್ಸ್ ಅವರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ನಿನ್ನೆ ರಾತ್ರಿ ವ್ಯಾನ್ಸ್ ಮನೆಗೆ ವ್ಯಕ್ತಿಯೊಬ್ಬ ಒಳನುಗ್ಗಿದ್ದನು. ಕೂಡಲೇ ಅಮೆರಿಕ ಸೀಕ್ರೆಟ್ ಸರ್ವಿಸ್ ಮತ್ತು ಸಿನ್ಸಿನಾಟಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದು ವ್ಯಕ್ತಿಯನ್ನು ಬಂಧಿಸಿದರು.
ಅಮೆರಿಕದ ಸೀಕ್ರೆಟ್ ಸರ್ವಿಸ್ ಅಧಿಕಾರಿಯೊಬ್ಬರು ಬೆಳಿಗ್ಗೆ 12:15ರ ಸುಮಾರಿಗೆ ಮನೆಯ ಬಳಿ ವ್ಯಕ್ತಿಯೊಬ್ಬ ಓಡಾಡುತ್ತಿರುವುದನ್ನು ಗಮನಿಸಿದ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನೆಯ ಸಮಯದಲ್ಲಿ ವ್ಯಾನ್ಸ್ ಕುಟುಂಬ ಇರಲಿಲ್ಲ. ಆರಂಭಿಕ ವರದಿಗಳ ಆಧಾರದ ಮೇಲೆ, ಆ ವ್ಯಕ್ತಿ ಉದ್ದೇಶಪೂರ್ವಕವಾಗಿ ಉಪಾಧ್ಯಕ್ಷರ ಮನೆಗೆ ಪ್ರವೇಶಿಸಿದ್ದನ್ನು ಎಂದು ನಂಬಲಾಗಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ಸ್ಥಳೀಯ ಮಾಧ್ಯಮಗಳು ಮನೆಯ ಮುರಿದ ಕಿಟಕಿಗಳನ್ನು ತೋರಿಸುತ್ತಿವೆ. ಆದರೂ ನಿಖರವಾದ ಮಾಹಿತಿ ಇನ್ನೂ ಸ್ಪಷ್ಟವಾಗಿಲ್ಲ. ವ್ಯಾನ್ಸ್ ಅಥವಾ ಅವರ ಕುಟುಂಬ ಸದಸ್ಯರನ್ನು ಈ ಘಟನೆಯಲ್ಲಿ ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗಿದೆಯೇ ಎಂದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಕಾನೂನು ಜಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ವಾರ, ವೆನೆಜುವೆಲಾದಲ್ಲಿ ಅಮೆರಿಕದ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಲು ಮಾರ್-ಎ-ಲಾಗೊದಲ್ಲಿ ಟ್ರಂಪ್ ಮತ್ತು ಇತರ ಹಿರಿಯ ಆಡಳಿತ ಅಧಿಕಾರಿಗಳೊಂದಿಗೆ ವ್ಯಾನ್ಸ್ ಇರಲಿಲ್ಲ. ಇದರ ಬೆನ್ನಲ್ಲೇ ಈ ಘಟನೆ ನಡೆದಿರುವುದು ಆತಂಕ ಸೃಷ್ಟಿಸಿದೆ.
Advertisement