

ದುಬೈ: ಇರಾನ್ ಸರ್ಕಾರ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ಆರಂಭವಾಗಿ 15 ದಿನಗಳು ದಾಟಿದೆ. ಹಿಂಸಾಚಾರದಲ್ಲಿ ಸಾವಿನ ಸಂಖ್ಯೆ ಕನಿಷ್ಠ 116 ಕ್ಕೆ ಏರಿಕೆಯಾಗಿದೆ.
ಇರಾನ್‌ನಲ್ಲಿ ಇಂಟರ್ನೆಟ್ ಸ್ಥಗಿತಗೊಂಡಿದ್ದು, ಫೋನ್ ಸಂಪರ್ಕಗಳು ಕಡಿತಗೊಂಡಿದೆ. ಪ್ರತಿಭಟನೆಗಳಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 116 ಕ್ಕೆ ಏರಿಕೆಯಾಗಿದ್ದು, 2,600 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ ಸುದ್ದಿ ಸಂಸ್ಥೆ ತಿಳಿಸಿದೆ.
ಇರಾನ್‌ನ ಅಟಾರ್ನಿ ಜನರಲ್ ಮೊಹಮ್ಮದ್ ಮೊವಾಹೆದಿ ಆಜಾದ್ ಅವರು ಪ್ರತಿಭಟನೆಗಳಲ್ಲಿ ಭಾಗವಹಿಸುವ ಯಾರನ್ನಾದರೂ ದೇವರ ಶತ್ರು ಎಂದು ಪರಿಗಣಿಸಲಾಗುತ್ತದೆ, ಇದು ಮರಣದಂಡನೆ ಆರೋಪ ಎಂದು ಎಚ್ಚರಿಸಿದರು. ಇರಾನ್‌ನ ಸರ್ಕಾರದ ದೂರದರ್ಶನ ಪ್ರಕಟಿಸಿದ ಹೇಳಿಕೆಯಲ್ಲಿ ಗಲಭೆಕೋರರಿಗೆ ಸಹಾಯ ಮಾಡಿದವರು ಸಹ ಆರೋಪವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗಿದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಭಟನಾಕಾರರಿಗೆ ಬೆಂಬಲ ನೀಡಿದ್ದಾರೆ. ಇರಾನ್ ಸ್ವಾತಂತ್ರ್ಯವನ್ನು ನೋಡುತ್ತಿದೆ, ಬಹುಶಃ ಹಿಂದೆಂದೂ ಕಾಣದ ರೀತಿಯಲ್ಲಿ. ಯುಎಸ್ಎ ಸಹಾಯ ಮಾಡಲು ಸಿದ್ಧವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನ್ಯೂಯಾರ್ಕ್ ಟೈಮ್ಸ್ ಮತ್ತು ವಾಲ್ ಸ್ಟ್ರೀಟ್ ಜರ್ನಲ್, ಯುಎಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಕಳೆದ ರಾತ್ರಿ ಟ್ರಂಪ್‌ಗೆ ಇರಾನ್ ಮೇಲೆ ದಾಳಿ ಮಾಡಲು ಮಿಲಿಟರಿ ಆಯ್ಕೆಗಳನ್ನು ನೀಡಲಾಗಿದೆ. ಆದರೆ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಹೇಳಿದೆ.
Advertisement