ಇರಾನ್ ಪ್ರತಿಭಟನೆಯಲ್ಲಿ 2000 ಜನ ಸಾವು; ಇದಕ್ಕೆ ಉಗ್ರರು ಕಾರಣ ಎಂದ ಅಧಿಕಾರಿಗಳು

ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ಸಾವಿನ ಹಿಂದೆ "ಭಯೋತ್ಪಾದಕರು" ಇದ್ದಾರೆ ಎಂದು ಅಧಿಕಾರಿಯೊಬ್ಬರು ಆರೋಪಿಸಿದ್ದಾರೆ. ಆದರೆ ಆ ಉಗ್ರರು ಯಾರು ಎಂಬುದರ ವಿವರವನ್ನು ನೀಡಿಲ್ಲ.
Nearly 2000 killed in protests, says Iranian official in first confirmation of death toll by an authority
ಇರಾನ್ ಪ್ರತಿಭಟನೆ
Updated on

ಟೆಹರಾನ್: ಇರಾನ್‌ನಲ್ಲಿ ಸರ್ಕಾರಿ ವಿರೋಧಿ ವ್ಯಾಪಕ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಪ್ರತಿಭಟನಾಕಾರರು ಸೇರಿದಂತೆ ಸುಮಾರು 2000 ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ಹೇಳಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.

ಅಮೆರಿಕ ಮತ್ತು ಯುರೋಪ್, ಇರಾನ್ ಮೇಲೆ ಮತ್ತೆ ಹೇರಿದ ನಿರ್ಬಂಧಗಳ ನಡುವೆ ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಸಂಕಷ್ಟದ ವಿರುದ್ಧ ಆರಂಭವಾದ ಹಿಂಸಾತ್ಮಕ ಪ್ರತಿಭಟನೆಗಳು ದೇಶಾದ್ಯಂತ ವ್ಯಾಪಿಸಿದ್ದು, ಮೃತಪಟ್ಟವರ ಸಂಖ್ಯೆ ಹೆಚ್ಚಾಗಿದೆ ಎಂದು ಅಧಿಕಾರಿಯೊಬ್ಬರು ಒಪ್ಪಿಕೊಂಡಿರುವುದು ಇದೇ ಮೊದಲು.

ರಾಯಿಟರ್ಸ್ ಪ್ರಕಾರ, ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ಸಾವಿನ ಹಿಂದೆ "ಭಯೋತ್ಪಾದಕರು" ಇದ್ದಾರೆ ಎಂದು ಅಧಿಕಾರಿಯೊಬ್ಬರು ಆರೋಪಿಸಿದ್ದಾರೆ. ಆದರೆ ಆ ಉಗ್ರರು ಯಾರು ಎಂಬುದರ ವಿವರವನ್ನು ನೀಡಿಲ್ಲ.

Nearly 2000 killed in protests, says Iranian official in first confirmation of death toll by an authority
ಯುದ್ಧಕ್ಕೂ ಸಿದ್ದ-ಮಾತುಕತೆಗೂ ಬದ್ಧ ಎಂದ ಇರಾನ್ ಸರ್ಕಾರ: ಮೃತರ ಸಂಖ್ಯೆ 648ಕ್ಕೆ ಏರಿಕೆ

ಈ ಹಿಂಸಾತ್ಮಕ ಪ್ರತಿಭಟನೆಗಳು ಇಸ್ರೇಲ್ ಮತ್ತು ಅಮೆರಿಕ ರೂಪಿಸಿದ "ದೇಶವನ್ನು ಅಸ್ಥಿರಗೊಳಿಸುವ" ಪ್ರಯತ್ನ ಎಂಬ ಆರೋಪವನ್ನು ಇರಾನ್ ಅಧಿಕಾರಿಗಳು ತಳ್ಳಿಹಾಕಿದ್ದಾರೆ.

ಸರ್ಕಾರವು ಪ್ರತಿಭಟನಾಕಾರರ ವಿರುದ್ಧ ನೇರ ಗುಂಡು ಹಾರಿಸಿದೆ ಮತ್ತು ನಾಲ್ಕು ದಿನಗಳಿಗಿಂತ ಹೆಚ್ಚು ಕಾಲ ಇಂಟರ್ನೆಟ್ ಸಂಪರ್ಕ ಕಡಿತಗೊಳಿಸಿರುವುದರೊಂದಿಗೆ ಪ್ರತಿಭಟನೆಯ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕುವುದು ಕಷ್ಟಕರವಾಗುತ್ತಿದೆ ಎಂದು ಮಾನವ ಹಕ್ಕುಗಳ ಸಂಘಟನೆಗಳು ಆರೋಪಿಸಿವೆ.

ಆದಾಗ್ಯೂ, ಇರಾನ್‌ನಲ್ಲಿ ಕಳೆದ ಕೆಲವು ದಿನಗಳಿಂದ ನಿರ್ಬಂಧಿಸಲಾಗಿದ್ದ ಅಂತರರಾಷ್ಟ್ರೀಯ ಫೋನ್ ಕರೆಗಳು ಪುನರಾರಂಭಗೊಂಡಿವೆ. ಆದರೆ ಹೊರಹೋಗುವ ಕರೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ನಾರ್ವೆ ಮೂಲದ ಎನ್‌ಜಿಒ ಇರಾನ್ ಹ್ಯೂಮನ್ ರೈಟ್ಸ್ (ಐಎಚ್‌ಆರ್), ಪ್ರತಿಭಟನೆಯ ಸಮಯದಲ್ಲಿ ಒಂಬತ್ತು ಅಪ್ರಾಪ್ತ ವಯಸ್ಕರು ಸೇರಿದಂತೆ 648 ಜನ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದೆ. ಆದರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಿರಬಹುದು. ಕೆಲವು ಅಂದಾಜಿನ ಪ್ರಕಾರ, 6,000 ಕ್ಕಿಂತ ಹೆಚ್ಚು" ಎಂದು ಹೇಳಿದೆ.

ಇರಾನ್ ನ 31 ಪ್ರಾಂತ್ಯಗಳಲ್ಲಿ 600 ಹೆಚ್ಚು ಪ್ರತಿಭಟನೆಗಳು ನಡೆದಿವೆ ಮತ್ತು ಇದುವರೆಗೆ ಸುಮಾರು 10,000 ಜನರನ್ನು ಬಂಧಿಸಲಾಗಿದೆ ಎಂದು ಎಂದು ಐಎಚ್‌ಆರ್ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com