ಬಲೂಚಿಸ್ತಾನದಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ: 70 ಭಯೋತ್ಪಾದಕರು, 10 ಭದ್ರತಾ ಸಿಬ್ಬಂದಿ ಹತ್ಯೆ!
ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನದ ವಿವಿಧೆಡೆ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ 70 ಭಯೋತ್ಪಾದಕರು ಹತ್ಯೆಯಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಭದ್ರತಾ ಪಡೆಗಳ ಮೂಲಗಳ ಪ್ರಕಾರ, ಹತ್ಯೆಗೀಡಾದ ಉಗ್ರರ ಸಂಖ್ಯೆ 108 ಎನ್ನಲಾಗಿದೆ. ಆದಾಗ್ಯೂ, ಇಲ್ಲಿಯವರೆಗೂ 70 ಭಯೋತ್ಪಾದಕರು ಹತ್ಯೆಯಾಗಿದ್ದು, ಶುಕ್ರವಾರ ರಾತ್ರಿಯಿಂದ ಪ್ರಾರಂಭವಾದ ಕಾರ್ಯಾಚರಣೆಗಳು ಶನಿವಾರ ಸಂಜೆಯೂ ಮುಂದುವರೆದಿದೆ ಎಂದು ಬಲೂಚಿಸ್ತಾನ್ ಮುಖ್ಯಮಂತ್ರಿ ಸರ್ಫರಾಜ್ ಬುಗ್ತಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA) ಭಯೋತ್ಪಾದಕರು ಗ್ವಾದರ್‌ನಲ್ಲಿ ನಾಗರಿಕರನ್ನು ಕೊಂದಿದ್ದಾರೆ. ಗುರುವಾರ ಮತ್ತು ಶುಕ್ರವಾರ ಬಲೂಚಿಸ್ತಾನದ ಪಂಜ್‌ಗುರ್ ಮತ್ತು ಹರ್ನೈನಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 41 ಉಗ್ರರು ಹತರಾದ ನಂತರ ನಡೆದ ಕಾರ್ಯಾಚರಣೆಯಲ್ಲಿ 10 ಉಗ್ರರ ಹತ್ಯೆ ನಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಫೆಬ್ರವರಿಯಿಂದ ಶನಿವಾರ ಸಂಜೆಯವರೆಗೂ ಕ್ವೆಟ್ಟಾ, ಗ್ವಾದಾರ್ ಸೇರಿದಂತೆ ವಿವಿಧ ಕಡೆಗಳಲ್ಲಿ ಕಾರ್ಯಾಚರಣೆ ನಡೆದಿರುವುದಾಗಿ ಬಲೋಚಿಸ್ತಾನ ಸರ್ಕಾರದ ವಕ್ತಾರ ಶಾಹೀದ್ ರಿಂದ್ ತಿಳಿಸಿದ್ದಾರೆ.

