ಜುಲೈ 4ರಿಂದ ಅಲಿ ಖಮೇನಿ ಅಂತಿಮ ವಿಧಿವಿಧಾನ: ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ, ಭದ್ರತಾ ಕಾರಣಕ್ಕೆ ಪುತ್ರ ಮೊಜ್ತಬಾ ಗೈರು..!

36 ವರ್ಷಗಳ ಕಾಲ ಇರಾನ್‌ನ ಸರ್ವೋಚ್ಚ ನಾಯಕರಾಗಿ ಸೇವೆ ಸಲ್ಲಿಸಿದ್ದ ಅಲಿ ಖಮೇನಿ ಅವರು ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಆರಂಭಿಸಿದ ದಿನವೇ ಮೃತಪಟ್ಟಿದ್ದರು. ಬಳಿಕ ಯುದ್ಧ ಪರಿಸ್ಥಿತಿ ಉಂಟಾದ ಕಾರಣ ಅಂತ್ಯಕ್ರಿಯೆಯನ್ನು ತಕ್ಷಣ ನಡೆಸದೆ ಮುಂದೂಡಲಾಗಿತ್ತು.
Ayatollah Ali Khamenei and his son Mojtaba Khamenei
ಅಯತೊಲ್ಲಾ ಅಲಿ ಖಮೇನಿ ಹಾಗೂ ಅವರ ಪುತ್ರ ಮೊಜ್ತಬಾ ಖಮೇನಿ
Updated on

ನವದೆಹಲಿ: ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಮತ್ತು ಅಂತಿಮ ವಿಧಿವಿಧಾನಗಳು ಜುಲೈ 4ರಿಂದ ಜುಲೈ 9ರವರೆಗೆ ಆರು ದಿನಗಳ ಕಾಲ ನಡೆಯಲಿವೆ. ಆದರೆ ಭದ್ರತಾ ಕಾರಣಗಳಿಂದಾಗಿ ಅವರ ಪುತ್ರ ಮೊಜ್ತಬಾ ಖಮೇನಿ ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ ಎಂದು ಭಾರತದಲ್ಲಿರುವ ಅವರ ಪ್ರತಿನಿಧಿ ತಿಳಿಸಿದ್ದಾರೆ.

ಭಾರತದಲ್ಲಿರುವ ಅಯತೊಲ್ಲಾ ಹಕೀಂ ಇಲಾಹಿ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಇಸ್ರೇಲ್‌ನಿಂದ ಎದುರಾಗಿರುವ ಭದ್ರತಾ ಬೆದರಿಕೆ ಹಾಗೂ ನಿಗಾ ವ್ಯವಸ್ಥೆಯ ಅಪಾಯದ ಹಿನ್ನೆಲೆಯಲ್ಲಿ ಮೊಜ್ತಬಾ ಖಮೇನಿ ಸಾರ್ವಜನಿಕವಾಗಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವುದು ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ.

36 ವರ್ಷಗಳ ಕಾಲ ಇರಾನ್‌ನ ಸರ್ವೋಚ್ಚ ನಾಯಕರಾಗಿ ಸೇವೆ ಸಲ್ಲಿಸಿದ್ದ ಅಲಿ ಖಮೇನಿ ಅವರು ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಆರಂಭಿಸಿದ ದಿನವೇ ಮೃತಪಟ್ಟಿದ್ದರು. ಬಳಿಕ ಯುದ್ಧ ಪರಿಸ್ಥಿತಿ ಉಂಟಾದ ಕಾರಣ ಅಂತ್ಯಕ್ರಿಯೆಯನ್ನು ತಕ್ಷಣ ನಡೆಸದೆ ಮುಂದೂಡಲಾಗಿತ್ತು.

ಅವರ ಅಂತ್ಯಕ್ರಿಯೆ ಜುಲೈ 4ರಂದು ಟೆಹ್ರಾನ್‌ನಲ್ಲಿ ಆರಂಭವಾಗಲಿದ್ದು, ಜುಲೈ 9ರಂದು ಅವರ ಹುಟ್ಟೂರಾದ ಈಶಾನ್ಯ ಇರಾನ್‌ನ ಪವಿತ್ರ ನಗರ ಮಶ್ಹದ್ನಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಜುಲೈ 7ರಂದು ಪವಿತ್ರ ನಗರ ಕೋಮ್ನಲ್ಲಿ ವಿಶೇಷ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.

ಈ ಆರು ದಿನಗಳ ಅವಧಿಯಲ್ಲಿ ಲಕ್ಷಾಂತರ ಜನರು ಅಂತಿಮ ದರ್ಶನಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಇದು ವಿಶ್ವದ ಗಮನ ಸೆಳೆದಿರುವ ಪ್ರಮುಖ ಅಂತ್ಯಕ್ರಿಯೆಗಳಲ್ಲಿ ಒಂದಾಗಿದೆ.

Ayatollah Ali Khamenei and his son Mojtaba Khamenei
ಖಮೇನಿ ಅಂತ್ಯಕ್ರಿಯೆಗೆ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್, ಕಾಂಗ್ರೆಸ್ ಅಧ್ಯಕ್ಷ ಖರ್ಗೆ, ಪವನ್ ಖೇರಾಗೆ ಇರಾನ್ ಆಹ್ವಾನ

ಭಾರತದಿಂದ ನಿಯೋಗ

ಮೂಲಗಳ ಪ್ರಕಾರ, ಬಿಹಾರ ರಾಜ್ಯಪಾಲ ಜನರಲ್ ಸಯ್ಯದ್ ಹಸ್ನೈನ್, ವಿದೇಶಾಂಗ ಖಾತೆ ರಾಜ್ಯ ಸಚಿವ ಪವಿತ್ರ ಮಾರ್ಗರಿಟಾ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದರೂ, ಪ್ರಧಾನಿ ಮೋದಿ ಈ ನಿಯೋಗದಲ್ಲಿ ಭಾಗಿಯಾಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

ಕಳೆದ ತಿಂಗಳು ಇರಾನ್ ಮತ್ತು ಅಮೆರಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದರೂ, ಮಧ್ಯಪ್ರಾಚ್ಯದಲ್ಲಿ ಉಭಯ ದೇಶಗಳ ನಡುವೆ ಕೆಲಕಾಲ ದಾಳಿಗಳು ಮುಂದುವರಿದಿದ್ದವು. ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ಇರಾನ್ ಕ್ರಮ ಕೈಗೊಂಡ ಬಳಿಕ, ಅಮೆರಿಕ 10 ಇರಾನಿನ ಸೇನಾ ಗುರಿಗಳ ಮೇಲೆ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿತ್ತು.

ಆದರೆ, ಇತ್ತೀಚಿನ ದಿನಗಳಲ್ಲಿ ಉದ್ವಿಗ್ನತೆ ಸ್ವಲ್ಪ ಮಟ್ಟಿಗೆ ತಗ್ಗಿದ್ದು, ಕತಾರ್‌ನ ದೋಹಾದಲ್ಲಿ ಅಮೆರಿಕ ಮತ್ತು ಇರಾನ್ ಪ್ರತಿನಿಧಿಗಳೊಂದಿಗೆ ನಡೆದ ಪ್ರತ್ಯೇಕ ಮಾತುಕತೆಯಲ್ಲಿ 14 ಅಂಶಗಳ ಒಪ್ಪಂದದ ಕುರಿತು ಸಕಾರಾತ್ಮಕ ಪ್ರಗತಿ ಕಂಡುಬಂದಿದೆ ಎಂದು ಕತಾರ್ ವಿದೇಶಾಂಗ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com