

ಅಮೆರಿಕಾ: ಬಟ್ಲರ್ ಸ್ಮಾರಕ ವಿಮಾನ ನಿಲ್ದಾಣದ ಬಳಿಯ ಮೈದಾನದಲ್ಲಿ ಸ್ಕೈಡೈವರ್ಸ್ ಅವರನ್ನು ಕರೆದೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡು ಎಲ್ಲ 12 ಮಂದಿ ಮೃತಪಟ್ಟಿದ್ದಾರೆ.
ಪತನಗೊಂಡ ವಿಮಾನ ಬೆಂಕಿ ಹತ್ತಿಕೊಂಡು ದಟ್ಟ ಹೊಗೆಯಿಂದ ಆವೃತವಾಗಿರುವ ದೃಶ್ಯಾವಳಿಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಸ್ಕೈಡೈವಿಂಗ್ ಕಂಪನಿಯೊಂದು ಗುತ್ತಿಗೆ ಪಡೆದಿದ್ದ ಈ ವಿಮಾನವು ಭಾನುವಾರ ಸ್ಥಳೀಯ ಸಮಯ 11:20 ರ ಸುಮಾರಿಗೆ ಹಾರಿತು.
ಹಾರಾಟ ವಿಫಲವಾಗಿ ತೀಕ್ಷ್ಣವಾದ ಎಡ ತಿರುವು ಪಡೆದು ಬಟ್ಲರ್ ಸ್ಮಾರಕ ವಿಮಾನ ನಿಲ್ದಾಣದಿಂದ ಸುಮಾರು 200 ಗಜಗಳಷ್ಟು ದೂರದಲ್ಲಿ ಅಪ್ಪಳಿಸಿತು. ವಿಮಾನದಲ್ಲಿದ್ದ ಎಲ್ಲಾ 12 ಜನರು ಸಾವನ್ನಪ್ಪಿದ್ದಾರೆ ಎಂದು ಬೇಟ್ಸ್ ಕೌಂಟಿ ತುರ್ತು ನಿರ್ವಹಣಾ ವಕ್ತಾರರು ತಿಳಿಸಿದ್ದಾರೆ.
ಇದು ವಾಣಿಜ್ಯ ವಿಮಾನವಲ್ಲ, ಸ್ಥಳೀಯ ವಿಮಾನ. ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (ಎಫ್‌ಎಎ) ವಿಮಾನವು ಪೆಸಿಫಿಕ್ ಏರೋಸ್ಪೇಸ್ ಪಿ 750 ಆಗಿದ್ದು, ವಿಮಾನ ನಿಲ್ದಾಣದಿಂದ ಹೊರಡುವಾಗ ಅಪಘಾತಕ್ಕೀಡಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪರಿಹಾರ ಕಾರ್ಯದಲ್ಲಿ ಬಟ್ಲರ್ ಪೊಲೀಸ್ ಠಾಣೆ ಮತ್ತು ಕೌಂಟಿ ಶ್ರಾಫ್ ಅಧಿಕಾರಿಗಳಿಗೆ ನೆರವಾಗುತ್ತಿರುವುದಾಗಿ ಮಿಸ್ಸೋರಿ ರಾಜ್ಯ ಹೆದ್ದಾರಿ ಗಸ್ತು ಪಡೆ ಹೇಳಿದೆ. ಕಾನ್ಸಸ್ ನಗರದಿಂದ 65 ಕಿಲೋಮೀಟರ್ ದಕ್ಷಿಣದ ಬಟ್ಲರ್ ಎಂಬ ಪಟ್ಟಣದಲ್ಲಿ ಈ ದುರಂತ ಸಂಭವಿಸಿದೆ.
Advertisement