

ಕಾಬೂಲ್: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಮಧ್ಯೆ ಹೆಚ್ಚಿದ ಗಡಿಯಾಚೆಗಿನ ಉದ್ವಿಗ್ನತೆ ನಡುವೆ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆ ಸೇರಿದಂತೆ ಪಾಕಿಸ್ತಾನದ ಪ್ರಮುಖ ಮಿಲಿಟರಿ ನೆಲೆಗಳ ಮೇಲೆ ವಾಯುದಾಳಿ ನಡೆಸಲಾಗಿದೆ ಎಂದು ಅಪ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್‌ನ ರಾಷ್ಟ್ರೀಯ ರಕ್ಷಣಾ ಸಚಿವಾಲಯ ಹೇಳಿದೆ.
ಅಫ್ಘಾನಿಸ್ತಾನದ ಪ್ರದೇಶದ ಮೇಲೆ ಪಾಕಿಸ್ತಾನದ ವಾಯುದಾಳಿಗಳಿಗೆ ಪ್ರತಿಕ್ರಿಯೆಯಾಗಿ ಈ ಬೆಳವಣಿಗೆಯಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಚಿವಾಲಯ, ಅಫ್ಘಾನ್ ವಾಯುಪಡೆಯು ಪ್ರಮುಖ ಪಾಕಿಸ್ತಾನಿ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಪರಿಣಾಮಕಾರಿ ವೈಮಾನಿಕ ದಾಳಿ ನಡೆಸಲಾಗಿದೆ ಎಂದು ಹೇಳಿದೆ.
ವೈಮಾನಿಕ ದಾಳಿಯಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆ, ಬಲೂಚಿಸ್ತಾನದ ಕ್ವೆಟ್ಟಾದಲ್ಲಿನ 12 ನೇ ಬ್ರಿಗೇಡ್ ಬೇಸ್ ಮತ್ತು ಖೈಬರ್ ಪಖ್ತುನ್‌ಖ್ವಾದಲ್ಲಿನ ಮೊಹಮಂಡ್ ಏಜೆನ್ಸಿಯ ಖೋಯ್ಜೈ ಕ್ಯಾಂಪ್ ಮತ್ತಿತರ ಮಿಲಿಟರಿ ಕಟ್ಟಡಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
Advertisement