ಹುಷಾರ್...: ಡೊನಾಲ್ಡ್ ಟ್ರಂಪ್‌ಗೆ ಇರಾನ್‌ನ ಉನ್ನತ ಭದ್ರತಾ ಅಧಿಕಾರಿ ಬೆದರಿಕೆ

ಟೆಹ್ರಾನ್ ಹಾರ್ಮುಜ್ ಜಲಸಂಧಿಯ ಮೂಲಕ ತೈಲ ಸಾಗಣೆಯನ್ನು ತಡೆಯಲು ಪ್ರಯತ್ನಿಸಿದರೆ ಅಮೆರಿಕ ಇರಾನ್‌ನ ಮೇಲೆ "ಇಪ್ಪತ್ತು ಪಟ್ಟು ಪ್ರಬಲವಾಗಿ" ದಾಳಿ ಮಾಡುತ್ತದೆ ಎಂದು ಟ್ರಂಪ್ ಎಚ್ಚರಿಸಿದ ನಂತರ, ಇರಾನ್ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಇಂದು X ನಲ್ಲಿ ಪೋಸ್ಟ್ ಮಾಡಿದ್ದಾರೆ.
Ali Larijani, Secretary of the Supreme National Security Council of Iran
ಇರಾನ್‌ನ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿ ಅಲಿ ಲಾರಿಜಾನಿonline desk
Updated on

ಟೆಹ್ರಾನ್: ಇರಾನ್‌ನ ಹಿರಿಯ ಭದ್ರತಾ ಅಧಿಕಾರಿಯೊಬ್ಬರು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಟೆಹ್ರಾನ್ ಹಾರ್ಮುಜ್ ಜಲಸಂಧಿಯ ಮೂಲಕ ತೈಲ ಸಾಗಣೆಯನ್ನು ತಡೆಯಲು ಪ್ರಯತ್ನಿಸಿದರೆ ಅಮೆರಿಕ ಇರಾನ್‌ನ ಮೇಲೆ "ಇಪ್ಪತ್ತು ಪಟ್ಟು ಪ್ರಬಲವಾಗಿ" ದಾಳಿ ಮಾಡುತ್ತದೆ ಎಂದು ಟ್ರಂಪ್ ಎಚ್ಚರಿಸಿದ ನಂತರ, ಇರಾನ್‌ನ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿ ಅಲಿ ಲಾರಿಜಾನಿ ಇಂದು X ನಲ್ಲಿ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ.

ಟ್ರಂಪ್ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಲಾರಿಜಾನಿ, ಇರಾನ್ ಜನ ಖಾಲಿ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು X ನಲ್ಲಿ ಬರೆದಿದ್ದಾರೆ. ನಿಮಗಿಂತ ಪ್ರಬಲ ವಿರೋಧಿಗಳಿಂದಲೂ ಇರಾನ್ ಅನ್ನು ನಾಶಮಾಡಲು ಸಾಧ್ಯವಾಗಿಲ್ಲ. ಟ್ರಂಪ್ ಸ್ವತಃ ತಮ್ಮ ಜೀವ ಉಳಿಸಿಕೊಳ್ಳುವುದರ ಬಗ್ಗೆ ಗಮನಹರಿಸಲಿ ಎಂದು ಎಚ್ಚರಿಸಿದ್ದಾರೆ.

Ali Larijani, Secretary of the Supreme National Security Council of Iran
ಇರಾನ್ ಮೇಲೆ ಇಂದು ತುಂಬಾ 'ಪ್ರಬಲ ದಾಳಿ': ಟ್ರಂಪ್ ವಾರ್ನಿಂಗ್; ಹಿಜ್ಬುಲ್ಲಾ ನಿಶ್ಯಸ್ತ್ರಗೊಳಿಸಿ- ಲೆಬನಾನ್‌ಗೆ ಇಸ್ರೇಲ್ ಎಚ್ಚರಿಕೆ!

ಇರಾನ್ ಟ್ರಂಪ್ ಅವರನ್ನು ಹತ್ಯೆ ಮಾಡಲು ಯೋಜಿಸುತ್ತಿದೆ ಎಂದು ಈ ಹಿಂದೆ ಅಮೆರಿಕ ಆರೋಪಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com