ಲ್ಯಾಂಡಿಂಗ್ ಆಗುವಾಗ ಕಳಚಿಬಿದ್ದ ವಿಮಾನದ ಚಕ್ರಗಳು: ಫುಕೆಟ್ ವಿಮಾನ ನಿಲ್ದಾಣ ತಾತ್ಕಾಲಿಕವಾಗಿ ಬಂದ್!

ಘಟನೆ ಹಿನ್ನೆಲೆಯಲ್ಲಿ ಬುಧವಾರ ಸಂಜೆ 6-30ರವರೆಗೂ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ ಎಂದು ಫ್ಲೈಟ್ ಟ್ರ್ಯಾಕಿಂಗ್ ಪ್ಲಾಟ್‌ಫಾರ್ಮ್ ಫ್ಲೈಟ್‌ರಾಡಾರ್ 24 ವರದಿ ಮಾಡಿದೆ.
suffers nose wheel damage
ಕಳಚಿದ ವಿಮಾನದ ಚಕ್ರಗಳು
Updated on

ಫುಕೆಟ್: ಹೈದರಾಬಾದ್‌ನಿಂದ ಥಾಯ್ಲೆಂಡ್‌ಗೆ 132 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಬುಧವಾರ ಬೆಳಗ್ಗೆ ಫುಕೆಟ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ಮುಂಭಾಗದ ಎರಡು ಚಕ್ರಗಳು ಕಳಚಿಕೊಂಡಿವೆ.

ಘಟನೆ ಹಿನ್ನೆಲೆಯಲ್ಲಿ ಬುಧವಾರ ಸಂಜೆ 6-30ರವರೆಗೂ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ ಎಂದು ಫ್ಲೈಟ್ ಟ್ರ್ಯಾಕಿಂಗ್ ಪ್ಲಾಟ್‌ಫಾರ್ಮ್ ಫ್ಲೈಟ್‌ರಾಡಾರ್ 24 ವರದಿ ಮಾಡಿದೆ.

ಹೈದರಾಬಾದ್‌ನಿಂದ ಬೆಳಗ್ಗೆ 6:42ಕ್ಕೆ ಟೇಕ್ ಆಫ್ ಆದ ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಬೋಯಿಂಗ್ 737 ಮ್ಯಾಕ್ಸ್ ವಿಮಾನ ಬೆಳಗ್ಗೆ 11.25ಕ್ಕೆ ಲ್ಯಾಂಡ್ ಆಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಮಾರ್ಚ್ 11 ರಂದು ಹೈದರಾಬಾದ್ ನಿಂದ ಹೊರಟ ವಿಮಾನ ಫುಕೆಟ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ಮುಂಭಾಗದ ಎರಡು ಚಕ್ರಗಳು ಪುಡಿ ಪುಡಿಯಾಗಿವೆ. ಇದರಿಂದಾಗಿ ವಿಮಾನವು ರನ್ ವೇಯಲ್ಲಿ ಸಿಲುಕಿಕೊಂಡಿದ್ದು, ನಿಲುಗಡೆ ಜಾಗಕ್ಕೆ ಎಳೆದುಕೊಂಡು ಹೋಗುವ ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಪುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಅವಘಡದ ಬಗ್ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಕ್ತಾರರು, ಲ್ಯಾಂಡಿಂಗ್ ವೇಳೆ ವಿಮಾನದ ಮುಂಭಾಗದ ಚಕ್ರದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಡಿದೆ. ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ನಮ್ಮ ಸಿಬ್ಬಂದಿ, ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದೆ.

ಲ್ಯಾಂಡಿಂಗ್ ಘಟನೆಯ ನಂತರ ಫುಕೆಟ್ ಏರ್‌ಪೋರ್ಟ್‌ನಲ್ಲಿರುವ ಏಕೈಕ ರನ್‌ವೇ ಮುಚ್ಚಲ್ಪಟ್ಟಿದೆ ಎಂದು Flighradar24 ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com