ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

ಇರಾನ್‌ನ ಹೊಸ ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡ ನಂತರ ಜಗತ್ತಿಗೆ ಮೊದಲ ಸಂದೇಶ ರವಾನಿಸಿರುವ ಮೊಜ್ತಬಾ ಖಮೇನಿ, ಅಮೆರಿಕ ಮತ್ತು ಇಸ್ರೇಲ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಾಳಿಗಳಲ್ಲಿ ಮೃತಪಟ್ಟ ಇರಾನಿಯನ್ನರ ಪ್ರತಿ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುತ್ತವೆ.
Mojtaba Khamenei
ಮೊಜ್ತಬಾ ಖಮೇನಿ
Updated on

ಇರಾನ್‌ನ ಹೊಸ ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡ ನಂತರ ಜಗತ್ತಿಗೆ ಮೊದಲ ಸಂದೇಶ ರವಾನಿಸಿರುವ ಮೊಜ್ತಬಾ ಖಮೇನಿ, ಅಮೆರಿಕ ಮತ್ತು ಇಸ್ರೇಲ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಾಳಿಗಳಲ್ಲಿ ಮೃತಪಟ್ಟ ಇರಾನಿಯನ್ನರ ಪ್ರತಿ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲಾಗುತ್ತದೆ. ಅಗತ್ಯವಿದ್ದರೆ ಸಂಘರ್ಷ ಹೊಸ ಮಜಲುಗಳನ್ನು ಪಡೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಇರಾನ್ ತನ್ನ ಹುತಾತ್ಮರ ರಕ್ತದ ಸೇಡು ತೀರಿಸಿಕೊಳ್ಳುವುದರಿಂದ ಹಿಂದೆ ಸರಿಯುವುದಿಲ್ಲ. ಇದು ದೇಶಕ್ಕೆ ಪ್ರಮುಖ ಆದ್ಯತೆಯಾಗಿ ಉಳಿದಿದೆ ಎಂದು ಖಮೇನಿ ಹೇಳಿದ್ದಾರೆ. ಪ್ರತೀಕಾರದ ಕ್ರಮದ ಒಂದು ಭಾಗವು ಈಗಾಗಲೇ ಪ್ರಾರಂಭವಾಗಿದೆ. ಆದರೆ ಅದು ಸಂಪೂರ್ಣವಾಗಿ ಪೂರ್ಣಗೊಳ್ಳುವವರೆಗೆ ಅದು ಇರಾನ್‌ನ ಆದ್ಯತೆಯಾಗಿ ಉಳಿಯುತ್ತದೆ ಎಂದರು. ತಮ್ಮ ಸಂದೇಶದಲ್ಲಿ ಮೊಜ್ತಬಾ ಖಮೇನಿ ಇರಾನ್‌ನ ಮಿಲಿಟರಿ ಕಾರ್ಯತಂತ್ರವು ಕೇವಲ ರಕ್ಷಣಾತ್ಮಕವಲ್ಲ ಎಂದು ಹೇಳಿದ್ದಾರೆ. ಅಗತ್ಯವಿದ್ದರೆ, ಪ್ರಸ್ತುತ ಸಂಘರ್ಷದ ಸಮಯದಲ್ಲಿ ಇತರ ಮಜಲು ತೆರೆಯಬಹುದು. ಇದು ಪ್ರದೇಶದಾದ್ಯಂತ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಬಹುದು ಎಂದು ಅವರು ಎಚ್ಚರಿಸಿದ್ದಾರೆ. ಇರಾನ್ ವಿರುದ್ಧ ದಾಳಿ ನಡೆಸಲಾಗುತ್ತಿರುವ ನೆರೆಯ ರಾಷ್ಟ್ರಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ದಾಳಿ ಮುಂದುವರಿಸಲಿದೆ ಎಂದರು.

Mojtaba Khamenei
West Asia conflict: ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿ ಕಾಲು ಕಟ್; ಕೋಮಾ ಸ್ಥಿತಿಯಲ್ಲಿ ಇರಾನ್ ನೂತನ ಪರಮೋಚ್ಛ ನಾಯಕ..?

ಖಮೇನಿ ತಮ್ಮ ಹೇಳಿಕೆಯಲ್ಲಿ, ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಒತ್ತಡವನ್ನು ಸಹ ಉಲ್ಲೇಖಿಸಿದ್ದಾರೆ. ಶತ್ರುಗಳ ಮೇಲೆ ಒತ್ತಡ ಹೇರಲು ಇದು ಪರಿಣಾಮಕಾರಿ ಮಾರ್ಗವಾಗಿದೆ. ಆದಾಗ್ಯೂ, ಇರಾನ್ ತನ್ನ ನೆರೆಹೊರೆಯವರೊಂದಿಗೆ ಸ್ನೇಹ ಸಂಬಂಧವನ್ನು ಕಾಪಾಡಿಕೊಳ್ಳಲು ಬಯಸುತ್ತದೆ ಎಂದರು. ಇದೇ ವೇಳೆ ಇರಾನ್‌ನ ಹೊಸ ಸರ್ವೋಚ್ಚ ನಾಯಕ, ಈ ಪ್ರದೇಶದಲ್ಲಿ ಸಕ್ರಿಯವಾಗಿ ಹೋರಾಡುತ್ತಿರುವವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಯೆಮೆನ್‌ನ ಹೌತಿ ಬಂಡುಕೋರರು, ಲೆಬನಾನ್‌ನ ಹೆಜ್ಬೊಲ್ಲಾ ಮತ್ತು ಇರಾಕಿ ಮಿತ್ರ ಗುಂಪುಗಳನ್ನು ಉಲ್ಲೇಖಿಸಿ, ಅವರೆಲ್ಲರೂ ಇರಾನ್‌ನೊಂದಿಗೆ ನಿಂತಿದ್ದಾರೆ ಎಂದರು.

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ನಡುವೆ ಇರಾನ್‌ನ ಹೊಸ ನಾಯಕ ಈ ಹೇಳಿಕೆ ನೀಡಿದ್ದಾರೆ. ಇರಾನ್‌ನ ಯುಎಸ್ ಮತ್ತು ಇಸ್ರೇಲ್‌ನೊಂದಿಗಿನ ಸಂಘರ್ಷವು 13ನೇ ದಿನಕ್ಕೆ ಕಾಲಿಟ್ಟಿದೆ. ಯುಎಸ್ ಮತ್ತು ಇಸ್ರೇಲಿ ದಾಳಿಯಲ್ಲಿ ಹತ್ಯೆಯಾದ ಮೊಜ್ತಬಾ ಖಮೇನಿ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ನಂತರ ಸುಪ್ರೀಂ ನಾಯಕರಾಗಿ ನೇಮಕಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com