ಇರಾನಿನ ರೆಡ್ ಕ್ರೆಸೆಂಟ್ ಸೊಸೈಟಿಗೆ ಚೀನಾ 2 ಲಕ್ಷ ಡಾಲರ್ ನೆರವು; ಅಮೆರಿಕ ದಾಳಿ ಖಂಡಿಸಿದ ಬೀಜಿಂಗ್

ಇರಾನ್ ನಲ್ಲಿ ನಾಗರಿಕರು ಮತ್ತು ಮಿಲಿಟರಿಯೇತರ ಟಾರ್ಗೆಟ್ ಗಳ ಮೇಲಿನ ವಿವೇಚನಾರಹಿತ ದಾಳಿಯನ್ನು ಬೀಜಿಂಗ್ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
China to give $200,000 aid to Iranian Red Crescent Society
ಚೀನಾ ಅಧ್ಯಕ್ಷ ಕ್ಷಿ ಜಿನ್ಪಿಂಗ್
Updated on

ಬೀಜಿಂಗ್: ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗುವೊ ಜಿಯಾಕುನ್ ಅವರು ಶುಕ್ರವಾರ ಇರಾನಿನ ರೆಡ್ ಕ್ರೆಸೆಂಟ್ ಸೊಸೈಟಿಗೆ 200,000 ಡಾಲರ್ ಮೌಲ್ಯದ ನೆರವು ನೀಡುವುದಾಗಿ ಹೇಳಿದ್ದಾರೆ ಎಂದು ಚೀನಾ ಡೈಲಿ ವರದಿ ಮಾಡಿದೆ.

ಇರಾನ್ ನಲ್ಲಿ ನಾಗರಿಕರು ಮತ್ತು ಮಿಲಿಟರಿಯೇತರ ಟಾರ್ಗೆಟ್ ಗಳ ಮೇಲಿನ ವಿವೇಚನಾರಹಿತ ದಾಳಿಯನ್ನು ಬೀಜಿಂಗ್ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದಕ್ಕೂ ಮೊದಲು, ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಭಾಗಿಯಾಗಿರುವ ಎಲ್ಲಾ ದೇಶಗಳೊಂದಿಗೆ ಸಂಪರ್ಕದಲ್ಲಿರಲು ಚೀನಾ ಇಚ್ಛೆ ವ್ಯಕ್ತಪಡಿಸಿದೆ ಎಂದು ಜಿಯಾಕುನ್ ಹೇಳಿರುವುದಾಗಿ ಚೀನಾ ಡೈಲಿ ವರದಿ ಮಾಡಿದೆ.

China to give $200,000 aid to Iranian Red Crescent Society
ಇರಾನ್ ಗೆ ಚೀನಾ ಮಾರಾಟ ಮಾಡಿದ್ದ HQ-9B ಠುಸ್: ಅಮೆರಿಕ-ಇಸ್ರೇಲ್ ದಾಳಿ ವೇಳೆ ಜಗಜ್ಜಾಹಿರಾದ ವೈಫಲ್ಯ!

ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಜಿಯಾಕುನ್, "ಸಂಘರ್ಷದಲ್ಲಿ ನೇರವಾಗಿ ಭಾಗಿಯಾಗಿರುವ ದೇಶಗಳು ಸೇರಿದಂತೆ ಎಲ್ಲಾ ಸಂಬಂಧಿತ ರಾಷ್ಟ್ರಗಳೊಂದಿಗೆ ಸಂವಹನವನ್ನು ಬಲಪಡಿಸುವುದನ್ನು ಮುಂದುವರಿಸುತ್ತದೆ ಮತ್ತು ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಮತ್ತು ಶಾಂತಿ ಪುನಃಸ್ಥಾಪಿಸುವಲ್ಲಿ ರಚನಾತ್ಮಕ ಪಾತ್ರ ವಹಿಸುತ್ತದೆ" ಎಂದು ಹೇಳಿದ್ದಾರೆ.

ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಕೂಡ ಇರಾನ್ ಜೊತೆ ಶಾಂತಿ ಮಾತುಕತೆ ನಡೆಸುತ್ತಿರುವಾಗ ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದ ಅಮೆರಿಕ ಮತ್ತು ಇಸ್ರೇಲ್ ಅನ್ನು ಟೀಕಿಸಿದ್ದಾರೆ ಎಂದು ಜಿಯಾಕುನ್ ತಿಳಿಸಿದ್ದಾರೆ.

ಇದಕ್ಕೂ ಮೊದಲು, ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಹಾರ್ಮುಜ್ ಜಲಸಂಧಿಯ ಕ್ರಿಯಾತ್ಮಕ ನಿರ್ಬಂಧದ ಬಗ್ಗೆ ಚೀನಾ ಕಳವಳ ವ್ಯಕ್ತಪಡಿಸಿತು ಮತ್ತು "ಸಂಬಂಧಿತ ದೇಶಗಳು" ತಕ್ಷಣವೇ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಬೇಕು ಮತ್ತು ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಪ್ಪಿಸಬೇಕು ಎಂದು ಚೀನಾ ಕರೆ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com