West Asia conflict: ಇರಾಕ್‌ನಲ್ಲಿ ಅಮೆರಿಕಾದ KC-135 ಸೇನಾ ವಿಮಾನ ಪತನ; ನಾಲ್ವರು ಸಿಬ್ಬಂದಿ ಸಾವು

ಪಶ್ಚಿಮ ಇರಾಕ್‌ನಲ್ಲಿ ಅಪಘಾತಕ್ಕೀಡಾದ ಯುಎಸ್ ಮಿಲಿಟರಿ ಕೆಸಿ -135 ಇಂಧನ ತುಂಬುವ ವಿಮಾನದಲ್ಲಿದ್ದ ಆರು ಸಿಬ್ಬಂದಿಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕನ್ ಮಿಲಿಟರಿ ಯುಎಸ್ ಸೆಂಟ್ರಲ್ ಕಮಾಂಡ್ ಘೋಷಿಸಿದೆ.
Damaged US Military flight
ಇರಾನ್ ದಾಳಿಯಿಂದ ಹಾನಿಯಾದ ಅಮೆರಿಕ ಯುದ್ಧ ವಿಮಾನದ ಸಾಂದರ್ಭಿಕ ಚಿತ್ರ
Updated on

ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅಮೆರಿಕದ ಇಂಧನ ತುಂಬುವ ವಿಮಾನ ಇರಾಕ್‌ನಲ್ಲಿ ಪತನಗೊಂಡಿದ್ದು, ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಪಶ್ಚಿಮ ಇರಾಕ್‌ನಲ್ಲಿ ಅಪಘಾತಕ್ಕೀಡಾದ ಯುಎಸ್ ಮಿಲಿಟರಿ ಕೆಸಿ -135 ಇಂಧನ ತುಂಬುವ ವಿಮಾನದಲ್ಲಿದ್ದ ಆರು ಸಿಬ್ಬಂದಿಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕನ್ ಮಿಲಿಟರಿ ಯುಎಸ್ ಸೆಂಟ್ರಲ್ ಕಮಾಂಡ್ ಘೋಷಿಸಿದೆ.

ಸೆಂಟ್ರಲ್ ಕಮಾಂಡ್ ಮಾಹಿತಿ ಪ್ರಕಾರ, ಈ ಕಾರ್ಯಾಚರಣೆಯಲ್ಲಿ ಎರಡು ವಿಮಾನಗಳು ಭಾಗಿಯಾಗಿದ್ದು, ಒಂದು ವಿಮಾನ ಸುರಕ್ಷಿತವಾಗಿ ಇಳಿದಿದ್ದರೆ ಮತ್ತೊಂದು ಪಶ್ಚಿಮ ಇರಾಕ್‌ನಲ್ಲಿ ಪತನಗೊಂಡಿದೆ. ರಕ್ಷಣಾ ಕಾರ್ಯ ಮುಂದುವರಿದಂತೆ ವಿಮಾನದಲ್ಲಿದ್ದ ಆರು ಸಿಬ್ಬಂದಿಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ.

ಘಟನೆ ಕುರಿತು ತನಿಖೆ ಪ್ರಗತಿಯಲ್ಲಿದೆ. ಆದಾಗ್ಯೂ, ಯಾವುದೇ ವಿಪತ್ತು ಅಥವಾ ಬೆಂಕಿಯಿಂದ ವಿಮಾನ ಪತನಗೊಂಡಿಲ್ಲ ಎಂದು ಯುಎಸ್ ಸೆಂಟ್ರಲ್ ಕಮಾಂಡ್ ಹೇಳಿಕೆಯಲ್ಲಿ ತಿಳಿಸಿದೆ.

ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧ ಕಾರ್ಯಾಚರಣೆಗಳ ನಡುವೆ ಅಮೆರಿಕದ ನಾಲ್ಕನೇ ವಿಮಾನ ಪತನ ಘಟನೆ ಇದಾಗಿದೆ. ಕಳೆದ ವಾರ ಅಮೆರಿಕದ ಮೂರು ಯುದ್ಧವಿಮಾನಗಳು ತಪ್ಪಾಗಿ ಅರ್ಥೈಸಿ ಮಿತ್ರ ರಾಷ್ಟ್ರ ಕುವೈತ್ ಪಡೆಗಳು ನಡೆಸಿದ ಗುಂಡಿನ ದಾಳಿಯಿಂದ ಹಾನಿಗೊಳಗಾಗಿದ್ದವು.

Damaged US Military flight
West Asia conflict: ಇರಾಕ್‌ನಲ್ಲಿ ಅಮೆರಿಕಾದ KC-135 ಸೇನಾ ವಿಮಾನ ಪತನ; ರಕ್ಷಣಾ ಕಾರ್ಯಾಚರಣೆ ಆರಂಭ

ಈ ನಡುವೆ ಇರಾನ್ ಯುದ್ಧದಲ್ಲಿ ಇದುವರೆಗೆ ಏಳು ಅಮೆರಿಕನ್ ಸೈನಿಕರು ಸಾವನ್ನಪ್ಪಿದ್ದು, ಸುಮಾರು 140 ಮಂದಿ ಗಾಯಗೊಂಡಿದ್ದಾರೆ ಎಂದು ಪೆಂಟಗನ್ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com