West Asia conflict: ಇರಾಕ್‌ನಲ್ಲಿ ಅಮೆರಿಕಾದ KC-135 ಸೇನಾ ವಿಮಾನ ಪತನ; ರಕ್ಷಣಾ ಕಾರ್ಯಾಚರಣೆ ಆರಂಭ

ಈ ಕಾರ್ಯಾಚರಣೆಯಲ್ಲಿ ಎರಡು ವಿಮಾನಗಳು ಭಾಗಿಯಾಗಿದ್ದು, ಒಂದು ವಿಮಾನ ಸುರಕ್ಷಿತವಾಗಿ ಇಳಿದಿದ್ದರೆ ಮತ್ತೊಂದು ಪಶ್ಚಿಮ ಇರಾಕ್‌ನಲ್ಲಿ ಪತನಗೊಂಡಿದೆ.
File photo
ಸಂಗ್ರಹ ಚಿತ್ರ
Updated on

ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅಮೆರಿಕದ ಇಂಧನ ತುಂಬುವ ವಿಮಾನ ಇರಾಕ್‌ನಲ್ಲಿ ಪತನಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಮೆರಿಕಾದ ಸೆಂಟ್ರಲ್ ಕಮಾಂಡ್ ತಿಳಿಸಿದೆ.

ಪತನಗೊಂಡ ವಿಮಾನವು KC-135 ಟ್ಯಾಂಕರ್ ಆಗಿದ್ದು, ಅದರಲ್ಲಿ ಕನಿಷ್ಠ ಐದು ಸಿಬ್ಬಂದಿ ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಸಂಭವಿಸಿರುವ ಸಾವು-ನೋವುಗಳ ಕುರಿತು ಇನ್ನೂ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ.

ಸೆಂಟ್ರಲ್ ಕಮಾಂಡ್ ಮಾಹಿತಿ ಪ್ರಕಾರ, ಈ ಕಾರ್ಯಾಚರಣೆಯಲ್ಲಿ ಎರಡು ವಿಮಾನಗಳು ಭಾಗಿಯಾಗಿದ್ದು, ಒಂದು ವಿಮಾನ ಸುರಕ್ಷಿತವಾಗಿ ಇಳಿದಿದ್ದರೆ ಮತ್ತೊಂದು ಪಶ್ಚಿಮ ಇರಾಕ್‌ನಲ್ಲಿ ಪತನಗೊಂಡಿದೆ ಎಂದು ತಿಳಿಸಿದೆ. ಇದೇ ವೇಳೆ ಶತ್ರುಗಳ ದಾಳಿಯಿಂದ ವಿಮಾನ ಪತನವಾಗಿಲ್ಲ ಎಂದೂ ಸೇನೆ ಸ್ಪಷ್ಟಪಡಿಸಿದೆ.

ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧ ಕಾರ್ಯಾಚರಣೆಗಳ ನಡುವೆ ಅಮೆರಿಕದ ನಾಲ್ಕನೇ ವಿಮಾನ ಪತನ ಘಟನೆ ಇದಾಗಿದೆ.

File photo
ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

ಕಳೆದ ವಾರ ಅಮೆರಿಕದ ಮೂರು ಯುದ್ಧವಿಮಾನಗಳು ತಪ್ಪಾಗಿ ಅರ್ಥೈಸಿ ಮಿತ್ರ ರಾಷ್ಟ್ರ ಕುವೈತ್ ಪಡೆಗಳು ನಡೆಸಿದ ಗುಂಡಿನ ದಾಳಿಯಿಂದ ಹಾನಿಗೊಳಗಾಗಿದ್ದವು.

ಈ ನಡುವೆ ಇರಾನ್ ಯುದ್ಧದಲ್ಲಿ ಇದುವರೆಗೆ ಏಳು ಅಮೆರಿಕನ್ ಸೈನಿಕರು ಸಾವನ್ನಪ್ಪಿದ್ದು, ಸುಮಾರು 140 ಮಂದಿ ಗಾಯಗೊಂಡಿದ್ದಾರೆ ಎಂದು ಪೆಂಟಗನ್ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com