ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ, ಮತ್ತೆ ದಾಳಿಯಾದರೆ ಒತ್ತಡಕ್ಕೆ ಮಣಿಯದೆ ಅನಿಯಂತ್ರಿತ ದಾಳಿ: ಇರಾನ್ ಕಠಿಣ ಎಚ್ಚರಿಕೆ

ದಾಳಿ ಮತ್ತೆ ಪುನರಾವರ್ತನೆಯಾದರೆ, ನಿಮ್ಮ ಇಂಧನ ಮೂಲಸೌಕರ್ಯ ಹಾಗೂ ನಿಮ್ಮ ಮಿತ್ರ ರಾಷ್ಟ್ರಗಳ ಮೇಲಿನ ದಾಳಿಗಳು ಸಂಪೂರ್ಣ ನಾಶವಾಗುವವರೆಗೆ ನಿಲ್ಲುವುದಿಲ್ಲ. ಇದೀಗ ನಡೆದಿರುವ ದಾಳಿಗಿಂತ ನಮ್ಮ ಪ್ರತಿಕ್ರಿಯೆ ಇನ್ನಷ್ಟು ತೀವ್ರವಾಗಿರುತ್ತದೆ.
Fire and plumes of smoke rise from an oil facility in Fujairah, United Arab Emirates, Saturday, March 14, 2026.
ಯುನೈಟೆಡ್ ಅರಬ್ ಎಮಿರೇಟ್ಸ್‌ನ ಫುಜೈರಾದಲ್ಲಿರುವ ತೈಲ ಘಟಕದಿಂದ ಬೆಂಕಿ ಹೊತ್ತಿಕೊಂಡಿರುವುದು.
Updated on

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಇಂಧನ ಮೂಲಸೌಕರ್ಯದ ಮೇಲೆ ನಡೆದ ದಾಳಿಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮತ್ತೊಮ್ಮೆ ಇಂತಹ ದಾಳಿ ನಡೆದರೆ ಯಾವುದೇ ಒತ್ತಡಕ್ಕೂ ಮಣಿಯದೆ “ಅನಿಯಂತ್ರಿತ ಪ್ರತಿದಾಳಿ” ನಡೆಸುವುದಾಗಿ ಇರಾನ್ ಸ್ಪಷ್ಟ ಎಚ್ಚರಿಕೆ ನೀಡಿದೆ.

ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ, ಮತ್ತೆ ದಾಳಿ ನಡೆಸಿದರೆ ಗಲ್ಫ್ ಪ್ರದೇಶದ ತೈಲ ಹಾಗೂ ಅನಿಲ ವಲಯವನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ ಇಸ್ರೇಲ್'ಗೆ ಇರಾನ್ ಕಠಿಣ ಎಚ್ಚರಿಕೆ ನೀಡಿದೆ.

ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಈ ಎಚ್ಚರಿಕೆ ನೀಡಿದ್ದು, “ಇಸ್ಲಾಮಿಕ್ ಗಣರಾಜ್ಯದ ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡುವ ಮೂಲಕ ನೀವು ದೊಡ್ಡ ತಪ್ಪು ಮಾಡಿದ್ದೀರಿ. ಅದರ ಪ್ರತಿಕ್ರಿಯೆಯನ್ನು ಈಗಾಗಲೇ ಕಾರ್ಯಗತಗೊಳಿಸಲಾಗುತ್ತಿದೆ ಎಂದು ಹೇಳಿದೆ.

“ಇದೇ ದಾಳಿ ಮತ್ತೆ ಪುನರಾವರ್ತನೆಯಾದರೆ, ನಿಮ್ಮ ಇಂಧನ ಮೂಲಸೌಕರ್ಯ ಹಾಗೂ ನಿಮ್ಮ ಮಿತ್ರ ರಾಷ್ಟ್ರಗಳ ಮೇಲಿನ ದಾಳಿಗಳು ಸಂಪೂರ್ಣ ನಾಶವಾಗುವವರೆಗೆ ನಿಲ್ಲುವುದಿಲ್ಲ. ಇದೀಗ ನಡೆದಿರುವ ದಾಳಿಗಿಂತ ನಮ್ಮ ಪ್ರತಿಕ್ರಿಯೆ ಇನ್ನಷ್ಟು ತೀವ್ರವಾಗಿರುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

Fire and plumes of smoke rise from an oil facility in Fujairah, United Arab Emirates, Saturday, March 14, 2026.
Iran-Israel war: ಇರಾನ್‌ ತೈಲ ಘಟಕದ ಮೇಲೆ ಇಸ್ರೇಲ್ ದಾಳಿ; ಗಲ್ಫ್ ರಾಷ್ಟ್ರಗಳ ಇಂಧನ ಸೌಲಭ್ಯಗಳ ಮೇಲೆ ಟೆಹ್ರಾನ್ ಪ್ರತೀಕಾರ

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ಕೂಡ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಇಸ್ರೇಲ್'ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ನಮ್ಮ ಎನರ್ಜಿ ಮೂಲಸೌಕರ್ಯಗಳ ಮೇಲೆ ಮತ್ತೆ ದಾಳಿ ನಡೆದರೆ ಯಾವುದೇ ತಡೆ ಇಲ್ಲದೆ ತೀವ್ರ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತೇವೆಂದು ಹೇಳಿದ್ದಾರೆ.

ಈಗಾಗಲೇ ನಡೆದ ಪ್ರತಿದಾಳಿಗಳಲ್ಲಿ ನಮ್ಮ ಶಕ್ತಿಯ “ಸ್ವಲ್ಪ ಭಾಗ”ವನ್ನು ಮಾತ್ರ ಬಳಸಿದ್ದೇವೆ. ಅಂತರರಾಷ್ಟ್ರೀಯ ಒತ್ತಡದಿಂದ ಇದುವರೆಗೆ ನಿಯಂತ್ರಣ ತೋರಿಸಿದ್ದೇವೆ, ಆದರೆ, ಮುಂದಿನ ದಾಳಿಯಲ್ಲಿ ಆ ನಿಯಂತ್ರಣ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ದಕ್ಷಿಣ ಇರಾನ್‌ನ ಬುಶೆಹರ್ ಪ್ರಾಂತ್ಯದ ಕರಾವಳಿಯಲ್ಲಿರುವ ವಿಶ್ವದ ಅತಿದೊಡ್ಡ ಅನಿಲ ಕ್ಷೇತ್ರವಾದ ಕಡಲಾಚೆಯ ಸೌತ್ ಪಾರ್ಸ್ ಕ್ಷೇತ್ರಕ್ಕೆ ಸಂಬಂಧಿಸಿದ ನೈಸರ್ಗಿಕ ಅನಿಲ ಸೌಲಭ್ಯಗಳ ಮೇಲೆ ದಾಳಿ ನಡೆದಿರುವುದಾಗಿ ಇರಾನ್ ಈ ಹಿಂದೆ ಹೇಳಿಕೆ ನೀಡಿತ್ತು.

ಅದರ ಬೆನ್ನಲ್ಲೇ, ಇರಾನಿನ ಕ್ಷಿಪಣಿ ದಾಳಿ ಖತರ್‌ ನ ರಾಸ್ ಲಫಾನ್ ಅನಿಲ ಸೌಲಭ್ಯದಲ್ಲಿ ವ್ಯಾಪಕ ಹಾನಿ ಉಂಟುಮಾಡಿದ್ದು, ಈ ಘಟನೆಯನ್ನು ಗಲ್ಫ್ ರಾಷ್ಟ್ರಗಳು ತೀವ್ರವಾಗಿ ಖಂಡಿಸಿವೆ.

ಈ ಬೆಳವಣಿಗೆಗಳು ಜಾಗತಿಕ ಮಟ್ಟದಲ್ಲಿ ಆತಂಕವನ್ನು ಉಂಟುಮಾಡಿದ್ದು, ತೈಲ ಮತ್ತು ಅನಿಲ ಸರಬರಾಜಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಗಲ್ಫ್ ಪ್ರದೇಶದಲ್ಲಿ ಭದ್ರತೆ ಕಠಿಣಗೊಳ್ಳುವ ಜೊತೆಗೆ, ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಗೆ ಕಾರಣವಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com