ಅಮೆರಿಕಾ ನಮ್ಮ ಮೇಲೆ ದಾಳಿ ಮಾಡಿದರೆ, ನಾವು ಭಾರತದ ಮೇಲೆ ದಾಳಿ ಮಾಡ್ತೇವೆ: ಪಾಕ್ ಮಾಜಿ ರಾಯಭಾರಿ ಅಬ್ದುಲ್‌ ಬಾಸಿತ್‌

ಯಾರಾದರೂ ನಮನ್ನು ಕೆಟ್ಟ ದಷ್ಟಿಯಿಂದ ನೋಡಿದರೆ ಪಾಕಿಸ್ತಾನಕ್ಕೆ ಭಾರತದ ಮೇಲೆ ಎಲ್ಲಿ ಬೇಕಾದರೂ ದಾಳಿ ಮಾಡುವುದನ್ನು ಬಿಟ್ಟು ಬೇರೆ ದಾರಿ ಇರುವುದಿಲ್ಲ. ನಾವು ಹಾಗೆ ಆಗಬಾರದು ಎಂದು ಬಯಸುತ್ತೇವೆ.
Former Pakistani envoy Abdul Basit
ಪಾಕ್ ರಾಯಭಾರಿ ಅಬ್ದುಲ್ ಬಸಿತ್ (ಸಂಗ್ರಹ ಚಿತ್ರ)
Updated on

ನವದೆಹಲಿ: ಭಾರತದಲ್ಲಿನ ಪಾಕಿಸ್ತಾನದ ಮಾಜಿ ರಾಯಭಾರಿ ಅಬ್ದುಲ್‌ ಬಾಸಿತ್‌ ನೀಡಿರುವ ವಿವಾದಾತ್ಮಕ ಹೇಳಿಕೆ ಇದೀಗ ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.

ಅಮೆರಿಕಾ ಪಾಕಿಸ್ತಾನದ ಅಣು ಸ್ಥಾವರಗಳ ಮೇಲೆ ದಾಳಿ ನಡೆಸಿದರೆ, ಅದರ ಪ್ರತಿಯಾಗಿ ಭಾರತದಲ್ಲಿನ ಪ್ರಮುಖ ನಗರಗಳಾದ ದೆಹಲಿ ಮತ್ತು ಮುಂಬೈ ಮೇಲೆ ದಾಳಿ ನಡೆಸುವುದಾಗಿ ಅಬ್ದುಲ್‌ ಬಾಸಿತ್‌ ಅವರು ಹೇಳಿದ್ದಾರೆ.

ಚರ್ಚಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಯಾರಾದರೂ ನಮನ್ನು ಕೆಟ್ಟ ದಷ್ಟಿಯಿಂದ ನೋಡಿದರೆ ಪಾಕಿಸ್ತಾನಕ್ಕೆ ಭಾರತದ ಮೇಲೆ ಎಲ್ಲಿ ಬೇಕಾದರೂ ದಾಳಿ ಮಾಡುವುದನ್ನು ಬಿಟ್ಟು ಬೇರೆ ದಾರಿ ಇರುವುದಿಲ್ಲ. ನಾವು ಹಾಗೆ ಆಗಬಾರದು ಎಂದು ಬಯಸುತ್ತೇವೆ, ಭಾರತವೂ ಹಾಗೆ ಬಯಸುವುದಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.

ಅಬ್ದುಲ್ ಬಾಸಿತ್ ಅವರು ಭಾರತವನ್ನು ಗುರಿಯಾಗಿಸುವ ಮಾತು ಹೇಳಿರುವುದಕ್ಕೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಸಿತ್‌ ಅವರು, 2014 ರಿಂದ 2017 ರವರೆಗೆ ನವದೆಹಲಿಯಲ್ಲಿ ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಭಾರತದೊಂದಿಗೆ ನೇರ ಸಂಪರ್ಕ ಸಾಧಿಸಿದ್ದರಿಂದ, ಅವರ ಹಿಂದಿನ ಪಾತ್ರವು ಪ್ರತಿಕ್ರಿಯೆಗೆ ಹೆಚ್ಚಿನ ಮಹತ್ವ ಇದೆ ಎಂದು ವ್ಯಾಖ್ಯಾನಿಸಲಾಗಿದೆ.

Former Pakistani envoy Abdul Basit
'ಪಾಕಿಸ್ತಾನದ ಪ್ರಧಾನಿ ಮತ್ತು ಸೇನಾಧಿಕಾರಿ ಶ್ರೇಷ್ಠ ನಾಯಕರು': ಆಫ್ಘಾನಿಸ್ತಾನ ಉದ್ವಿಗ್ನತೆ ಮಧ್ಯೆ ಹಾಡಿಹೊಗಳಿದ Donald Trump; Video

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com