

ಇಸ್ಲಮಾಬಾದ್: ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಕಮರ್ ಜಾವೇದ್ ಬಜ್ವಾ ಮೃತಪಟ್ಟಿದ್ದಾರೆ. ಸ್ನಾನಗೃಹದಲ್ಲಿ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಜ್ವಾ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ರಾವಲ್ಪಿಂಡಿಯ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರೆ. ಬಜ್ವಾ ಅವರ ಕುಟುಂಬ ಸದಸ್ಯರು ಅವರ ಸಾವನ್ನು ದೃಢಪಡಿಸಿದ್ದಾರೆ.
ಕಮರ್ ಬಜ್ವಾ ಅವರನ್ನು ಫೆಬ್ರವರಿ 11ರಂದು ರಾವಲ್ಪಿಂಡಿ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಪಘಾತದಲ್ಲಿ ಅವರ ತಲೆಗೆ ಗಂಭೀರ ಗಾಯವಾಗಿತ್ತು. ವೈದ್ಯರು ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಘೋಷಿಸಿದ್ದರು. ಆದರೆ ಅವರ ಚೇತರಿಕೆ ಅವರ ನಿರೀಕ್ಷೆಗಳನ್ನು ಸುಳ್ಳಾಗಿಸಿತ್ತು. ಬಜ್ವಾ 2016 ರಿಂದ 2022ರವರೆಗೆ ಪಾಕಿಸ್ತಾನದ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು.
65 ವರ್ಷದ ಬಾಜ್ವಾ 2016ರ ನವೆಂಬರ್ 29ರಿಂದ 2022ರ ನವೆಂಬರ್ 29ರವರೆಗೆ ಪಾಕಿಸ್ತಾನ ಸೇನೆಯ 10ನೇ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಅವರ ಅವಧಿಯನ್ನು 2019ರಲ್ಲಿ ವಿಸ್ತರಿಸಲಾಯಿತು. 2022ರ ಕೊನೆಯಲ್ಲಿ ನಿವೃತ್ತರಾದ ನಂತರ, ಬಾಜ್ವಾ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು.
Advertisement