ಥಾಯ್ಲೆಂಡ್‌ನ ಫುಕೆಟ್ ನಲ್ಲಿ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅವಘಡ: 11 ಮಂದಿ ಸಾವು, 16 ಜನರಿಗೆ ಗಾಯ

ಗಾಯಗೊಂಡವರ ಪೈಕಿ 15 ಮಂದಿ ಥಾಯ್ಲೆಂಡ್‌ನವರು ಹಾಗೂ ಒಬ್ಬರು ಮ್ಯಾನ್ಮಾರ್ ಪ್ರಜೆಯಾಗಿದ್ದಾರೆ. ಮೃತಪಟ್ಟವರು ಮತ್ತು ಗಾಯಗೊಂಡವರಲ್ಲಿ ಯಾವುದೇ ಪ್ರವಾಸಿಗರು ಇಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
Fire in a commercial shophouse in Phuket
ಥಾಯ್ಲೆಂಡ್‌ನ ಫುಕೆಟ್‌ನಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಅವಘಡ
Updated on: 

ಬ್ಯಾಂಕಾಕ್: ಥಾಯ್ಲೆಂಡ್‌ನ ಜನಪ್ರಿಯ ಪ್ರವಾಸಿ ದ್ವೀಪ ಫುಕೆಟ್‌ನಲ್ಲಿರುವ ವಾಣಿಜ್ಯ ಕಟ್ಟಡವೊಂದರಲ್ಲಿ ಇಂದು ಸೋಮವಾರ ಮುಂಜಾನೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 11 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ರಾಯಿಟರ್ಸ್‌ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಗಾಯಗೊಂಡವರ ಪೈಕಿ 15 ಮಂದಿ ಥಾಯ್ಲೆಂಡ್‌ನವರು ಹಾಗೂ ಒಬ್ಬರು ಮ್ಯಾನ್ಮಾರ್ ಪ್ರಜೆಯಾಗಿದ್ದಾರೆ. ಮೃತಪಟ್ಟವರು ಮತ್ತು ಗಾಯಗೊಂಡವರಲ್ಲಿ ಯಾವುದೇ ಪ್ರವಾಸಿಗರು ಇಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ವಾಹನ ಬಾಡಿಗೆ ವ್ಯವಹಾರ ನಡೆಸುತ್ತಿದ್ದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅಕ್ಕಪಕ್ಕದ ಹಲವು ಕಟ್ಟಡಗಳಿಗೂ ವ್ಯಾಪಿಸಿದೆ.

ಇಂದು ನಸುಕಿನ ಜಾವ 3.17ರ ಸುಮಾರಿಗೆ (ಜಿಎಂಟಿ ಸಮಯ 20.17) ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸುಮಾರು ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ಥಾಯ್ಲೆಂಡ್ ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ.

ಫುಕೆಟ್‌ನ ಪಶ್ಚಿಮ ಕರಾವಳಿಯಲ್ಲಿರುವ ಜನಪ್ರಿಯ ಪಟಾಂಗ್ ಕಡಲತೀರದ ಸಮೀಪದ ಪಟ್ಟಣ ಪ್ರದೇಶದಲ್ಲಿ ಈ ಕಟ್ಟಡವಿದೆ. ಇದಕ್ಕೂ ನಾಲ್ಕು ತಿಂಗಳ ಹಿಂದೆ ಬ್ಯಾಂಕಾಕ್‌ನ ಬಾರ್‌ವೊಂದರಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದರು.

Fire in a commercial shophouse in Phuket
Nvidia ಸಿಇಒ ಸ್ಥಾನಕ್ಕೆ ಮರಳಲು 'ವಾರ್ ರೂಂ' ಸಜ್ಜುಗೊಳಿಸಿದ ಜೆನ್ಸನ್ ಹುವಾಂಗ್: ವರದಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X