ನೇಪಾಳ: ಕೋಶಿ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ; ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆ ದಾಖಲು; ಸಿಕ್ಕಿಂ-ಉತ್ತರ ಬಂಗಾಳದಲ್ಲೂ ಕಂಪಿಸಿದ ಭೂಮಿ..!

ಕಠ್ಮಂಡು: ನೆರೆಯ ರಾಷ್ಟ್ರ ನೇಪಾಳದ ಕೋಶಿ ಪ್ರಾಂತ್ಯದಲ್ಲಿ ಮಂಗಳವಾರ ಮುಂಜಾನೆ 5.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಇದರ ಪರಿಣಾಮವಾಗಿ ಭಾರತದ ಸಿಕ್ಕಿಂ, ಉತ್ತರ ಬಂಗಾಳ ಸೇರಿದಂತೆ ಪೂರ್ವ ಹಾಗೂ ಈಶಾನ್ಯ ರಾಜ್ಯಗಳ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ.
ಭೂಕಂಪದಿಂದ ಉತ್ತರ ಬಂಗಾಳದ ಡಾರ್ಜಿಲಿಂಗ್, ಜಲ್ಪೈಗುರಿ ಮತ್ತು ಕೂಚ್‌ಬೆಹಾರ್ ಜಿಲ್ಲೆಗಳು ಹಾಗೂ ಸಿಕ್ಕಿಂನಲ್ಲಿ ಯಾವುದೇ ಸಾವು-ನೋವು ಅಥವಾ ಆಸ್ತಿ ಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಸುಮಾರು 7 ಗಂಟೆಗೆ ಭೂಮಿ ಕಂಪಿಸಿದ್ದು, ಭಯಭೀತರಾದ ಜನರು ಹಲವು ಪ್ರದೇಶಗಳಲ್ಲಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.
ಯುರೋಪಿಯನ್ ಮೆಡಿಟರೇನಿಯನ್ ಭೂಕಂಪಶಾಸ್ತ್ರ ಕೇಂದ್ರದ (ಇಎಂಎಸ್‌ಸಿ) ಮಾಹಿತಿ ಪ್ರಕಾರ, ನೇಪಾಳದ ಕೋಶಿ ಪ್ರಾಂತ್ಯದಲ್ಲಿ ಭೂಮಿಯ ಮೇಲ್ಮೈಯಿಂದ ಸುಮಾರು 10 ಕಿ.ಮೀ. ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಸಿಕ್ಕಿಂನ ಯುಕ್ಸೋಮ್‌ನಿಂದ ಉತ್ತರ-ವಾಯವ್ಯ ದಿಕ್ಕಿನಲ್ಲಿ 61 ಕಿ.ಮೀ. ದೂರದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ. ಇದು ಉತ್ತರ ಅಕ್ಷಾಂಶ 27.855 ಡಿಗ್ರಿ ಮತ್ತು ಪೂರ್ವ ರೇಖಾಂಶ 87.909 ಡಿಗ್ರಿಯಲ್ಲಿದೆ.
ಭೂಕಂಪದಿಂದ ಪೀಡಿತ ಪ್ರದೇಶಗಳಲ್ಲಿ ಯಾವುದೇ ಹಾನಿ ಸಂಭವಿಸಿದೆಯೇ ಎಂಬುದನ್ನು ತಿಳಿದುಕೊಳ್ಳಲು ಅಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



