ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಹಣೆಗೆ ಮುತ್ತಿಟ್ಟ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?

ಕಳೆದ ಬುಧವಾರ ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ 'ಫ್ಲೈದುಬೈ' ವಿಮಾನ FZ1073ರ ಕಾಕ್‌ಪಿಟ್‌ನಲ್ಲಿ ಸಹ-ಪೈಲಟ್‌ನಿಂದ ಇರಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಚ್ಚಾರ್ ಅವರು ದುಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
UAE Deputy PM, Crown Prince Hamdan Meets flydubai Hero Smit Machchhar In Hospital
ಆಸ್ಪತ್ರೆಗೆ ಭೇಟಿ ನೀಡಿ ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಆರೋಗ್ಯ ವಿಚಾರಿಸಿದ ದುಬೈ ಕ್ರೌನ್ ಪ್ರಿನ್ಸ್
Updated on: 

ದುಬೈ: ದುಬೈ ಯುವರಾಜ ಹಾಗೂ ಯುಎಇ ಉಪ ಪ್ರಧಾನಿ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೂಮ್ ಅವರು ಆಸ್ಪತ್ರೆಗೆ ಭೇಟಿ ನೀಡಿ, 'ಫ್ಲೈದುಬೈ' (flydubai) ಪೈಲಟ್, ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಆರೋಗ್ಯ ವಿಚಾರಿಸಿದ್ದಾರೆ.

ಕಳೆದ ಬುಧವಾರ ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ 'ಫ್ಲೈದುಬೈ' ವಿಮಾನ FZ1073ರ ಕಾಕ್‌ಪಿಟ್‌ನಲ್ಲಿ ಸಹ-ಪೈಲಟ್‌ನಿಂದ ಇರಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಚ್ಚಾರ್ ಅವರು ದುಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಆರೋಗ್ಯ ವಿಚಾರಿಸಿದ ದುಬೈ ಕ್ರೌನ್ ಪ್ರಿನ್ಸ್, ಭಾರತೀಯ ಪೈಲಟ್ ಬಗ್ಗೆ "ಭಾರೀ ಮೆಚ್ಚುಗೆ ಮತ್ತು ಪ್ರಶಂಸೆ" ವ್ಯಕ್ತಪಡಿಸಿದ್ದಾರೆ.

UAE Deputy PM, Crown Prince Hamdan Meets flydubai Hero Smit Machchhar In Hospital
'ಕಮಾಲ್ ಕರ್ ದಿಯಾ ಪೈಲಟ್ ಜಿ, ನಿಮ್ಮ ಧೈರ್ಯಕ್ಕೆ ನಮ್ಮ ಸೆಲ್ಯೂಟ್': ಕ್ಯಾಪ್ಟನ್ ಸ್ಮಿತ್ ಮಚ್ಚರ್'ರನ್ನು ಹಾಡಿ ಹೊಗಳಿದ ಸಲ್ಮಾನ್ ಖಾನ್!

"ನಮ್ಮಿಂದ ಹಾಗೂ ರಾಷ್ಟ್ರದ ನಾಯಕತ್ವದಿಂದ ಅವರಿಗೆ ಸಂಪೂರ್ಣ ಮೆಚ್ಚುಗೆ ಮತ್ತು ಪ್ರಶಂಸೆ ಸಲ್ಲುತ್ತದೆ. ಅವರು ನಮ್ಮ ತಂಡದ ಭಾಗವಾಗಿರುವುದಕ್ಕೆ... ನಮ್ಮ ರಾಷ್ಟ್ರದ ಕಥೆಯ ಭಾಗವಾಗಿರುವುದಕ್ಕೆ... ಹಾಗೂ ಯುಎಇ (UAE) ಪ್ರತಿನಿಧಿಸುವ ಮೌಲ್ಯಗಳ ಭಾಗವಾಗಿರುವುದಕ್ಕೆ ನಮಗೆ ಹೆಮ್ಮೆಯಿದೆ... ಇದು ಸಹಾನುಭೂತಿಯ ರಾಷ್ಟ್ರ... ಶಾಂತಿಯ ರಾಷ್ಟ್ರ... ಮತ್ತು ಜೀವಕ್ಕೆ ಬೆಲೆ ನೀಡುವ ರಾಷ್ಟ್ರ," ಎಂದು ಮಚ್ಚರ್ ಭೇಟಿ ಬಳಿಕ ಕ್ರೌನ್ ಪ್ರಿನ್ಸ್ 'ಎಕ್ಸ್' (X) ನಲ್ಲಿ ಬರೆದುಕೊಂಡಿದ್ದಾರೆ.

ಮಚ್ಚರ್ ಭೇಟಿಯ ಫೋಟೋಗಳನ್ನು ಹಂಚಿಕೊಂಡಿರುವ ಕ್ರೌನ್ ಪ್ರಿನ್ಸ್, ಮಚ್ಚಾರ್ ಅವರೊಂದಿಗೆ ಮಾತನಾಡುತ್ತಿರುವುದು ಮತ್ತು ಅವರನ್ನು ಅಪ್ಪಿಕೊಳ್ಳುತ್ತಿರುವುದು ಹಾಗೂ ಅವರ ಹಣೆಗೆ ಮುತ್ತಿಡುತ್ತಿರುವುದು ಕಂಡುಬಂದಿದೆ.

ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ‘ಫ್ಲೈದುಬೈ’ ವಿಮಾನದಲ್ಲಿ ಸಹ-ಪೈಲಟ್ ನಡೆಸಿದ ದಾಳಿಯ ಪ್ರಯತ್ನವನ್ನು ವಿಫಲಗೊಳಿಸುವ ಮೂಲಕ 180 ಜನರ ಪ್ರಾಣ ಉಳಿಸಿದ ಭಾರತದ ಧೈರ್ಯಶಾಲಿ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಬಗ್ಗೆ ಜಗತ್ತಿನಾದ್ಯಂತ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com