ಭಾರತ-ಇರಾನ್ ನಡುವೆ ವ್ಯಾಪಾರ ಒಪ್ಪಂದ ಮಾತುಕತೆ ನಡೆಯುತ್ತಿಲ್ಲ: ಮಾರ್ಕೊ ರೂಬಿಯೊ

ಬಿಷ್ಕೆಕ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರನ್ನು ಭೇಟಿಯಾಗಿದ್ದ ಕುರಿತು ‘ಫಾಕ್ಸ್ ನ್ಯೂಸ್ ರೇಡಿಯೊ’ದ ‘ದಿ ಬ್ರಯಾನ್ ಕಿಲ್ಮೀಡ್ ಶೋ’ನಲ್ಲಿ ಕೇಳಿದ ಪ್ರಶ್ನೆಗೆ ರೂಬಿಯೊ ಪ್ರತಿಕ್ರಿಯಿಸಿದರು.
US Secretary of State Marco Rubio (L), Prime Minister Narendra Modi with Iranian President Masoud Pezeshkian
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ (ಎಡ), ಪ್ರಧಾನಿ ನರೇಂದ್ರ ಮೋದಿ ಹಾಗೂ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್
Updated on

ವಾಷಿಂಗ್ಟನ್: ಭಾರತ ಮತ್ತು ಇರಾನ್ ನಡುವೆ ವ್ಯಾಪಾರ ಒಪ್ಪಂದದ ಮಾತುಕತೆ ನಡೆಯುತ್ತಿದೆ ಎಂದು ತಮಗೆ ಅನಿಸುವುದಿಲ್ಲ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹೇಳಿದ್ದಾರೆ. ಜಗತ್ತಿನ ಹಲವು ದೇಶಗಳು ಇರಾನ್ ಆಡಳಿತದೊಂದಿಗೆ ಮಾತುಕತೆ ನಡೆಸುತ್ತಿವೆ ಎಂದೂ ಅವರು ಹೇಳಿದ್ದಾರೆ.

ಬಿಷ್ಕೆಕ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರನ್ನು ಭೇಟಿಯಾಗಿದ್ದ ಕುರಿತು ‘ಫಾಕ್ಸ್ ನ್ಯೂಸ್ ರೇಡಿಯೊ’ದ ‘ದಿ ಬ್ರಯಾನ್ ಕಿಲ್ಮೀಡ್ ಶೋ’ನಲ್ಲಿ ಕೇಳಿದ ಪ್ರಶ್ನೆಗೆ ರೂಬಿಯೊ ಪ್ರತಿಕ್ರಿಯಿಸಿದರು.

ಪ್ರಧಾನಿ ಮೋದಿ ಮತ್ತು ಪೆಜೆಶ್ಕಿಯಾನ್ ಅವರು ವ್ಯಾಪಾರ ಒಪ್ಪಂದಕ್ಕೆ ಮುಂದಾಗಿರುವಂತೆ ಕಾಣುತ್ತಿದೆ ಎಂಬ ನಿರೂಪಕ ಬ್ರಯಾನ್ ಕಿಲ್ಮೀಡ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರೂಬಿಯೊ, ಭಾರತ ಮತ್ತು ಇರಾನ್ ನಡುವೆ ವ್ಯಾಪಾರ ಒಪ್ಪಂದವಿದೆ ಎಂದು ನನಗನಿಸುವುದಿಲ್ಲ. ಸಹಜವಾಗಿಯೇ ಪ್ರತಿಯೊಂದು ದೇಶವೂ ತನ್ನದೇ ಆದ ವಿದೇಶಾಂಗ ನೀತಿಯನ್ನು ರೂಪಿಸಿಕೊಳ್ಳುತ್ತದೆ. ಜಗತ್ತಿನ ಹಲವು ದೇಶಗಳು ಇರಾನ್ ಆಡಳಿತದೊಂದಿಗೆ ಮಾತುಕತೆ ನಡೆಸುತ್ತವೆ ಎಂದು ಹೇಳಿದರು.

ಕೆಲವು ಮಾತುಕತೆಗಳ ವಿಚಾರದಲ್ಲಿ ನಾವೂ ಕೂಡ ಇರಾನ್ ಆಡಳಿತದ ಕೆಲವು ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದೇವೆ. ಅವರೊಂದಿಗೆ ಸಂಪರ್ಕವೂ ನಡೆದಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹೇಳಿದರು.

US Secretary of State Marco Rubio (L), Prime Minister Narendra Modi with Iranian President Masoud Pezeshkian
ಗಲ್ಫ್ ಆಫ್ ಮೆಕ್ಸಿಕೋ, ಒಂಟಾರಿಯೊ ಲೇಕ್ ಬಳಿಕ Strait of Hormuz ಗೆ ನನ್ನ ಹೆಸರು ಮರುನಾಮಕರಣ ಮಾಡಿ- ಅಮೆರಿಕ ಅಧ್ಯಕ್ಷ Trump ವಿಚಿತ್ರ ಬೇಡಿಕೆ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಯಾವುದೇ ದೇಶವೂ ಇರಾನ್‌ಗೆ ಅಮೆರಿಕದ ನಿರ್ಬಂಧಗಳನ್ನು ತಪ್ಪಿಸಿಕೊಳ್ಳಲು ನೆರವಾಗಬಾರದು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ ಎಂದು ರೂಬಿಯೊ ಹೇಳಿದರು.

ಯಾವುದೇ ದೇಶವೂ ಇರಾನ್‌ಗೆ ಆದಾಯ ಗಳಿಸಲು ಮಾರ್ಗಗಳನ್ನು ಸೃಷ್ಟಿಸಲು ನೆರವಾಗಬಾರದು. ಆ ಆದಾಯವನ್ನು ಅವರು ಭಯೋತ್ಪಾದನೆಗೆ ಬೆಂಬಲ ನೀಡಲು ಹಾಗೂ ಪರಮಾಣು ಅಸ್ತ್ರ ನಿರ್ಮಿಸಲು ಬಳಸಬಹುದು. ಯಾವುದೇ ದೇಶಗಳು ಹೀಗೆ ಮಾಡಲು ನಿರ್ಧರಿಸಿದರೆ, ನಾವು ಆ ದೇಶಗಳ ಮೇಲೂ ನಿರ್ಬಂಧ ವಿಧಿಸಬೇಕಾಗುತ್ತದೆ ಎಂದು ರೂಬಿಯೊ ಎಚ್ಚರಿಸಿದರು.

ಇದೇ ವೇಳೆ, ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗಿನ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಇರಾನ್‌ನೊಂದಿಗೆ ಭಾರತದ ವ್ಯಾಪಾರ ವಹಿವಾಟಿನ ವಲಯವನ್ನು ವಿಸ್ತರಿಸಿ, ವೈವಿಧ್ಯಮಯಗೊಳಿಸುವ ಬಯಕೆಯನ್ನು ವ್ಯಕ್ತಪಡಿಸಿದರು.

ಬಿಷ್ಕೆಕ್‌ನಲ್ಲಿ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರನ್ನು ಭೇಟಿಯಾದೆ. ವಿವಿಧ ಕ್ಷೇತ್ರಗಳಲ್ಲಿ ಇರಾನ್‌ನೊಂದಿಗಿನ ಭಾರತದ ದೀರ್ಘಕಾಲದ ಸ್ನೇಹವನ್ನು ಮತ್ತಷ್ಟು ಬಲಪಡಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಿದೆ ಎಂದು ಪ್ರಧಾನಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ನಮ್ಮ ವ್ಯಾಪಾರ ವಹಿವಾಟಿನ ವ್ಯಾಪ್ತಿಯನ್ನು ವಿಸ್ತರಿಸಿ, ವೈವಿಧ್ಯಮಯಗೊಳಿಸಲು ನಾವು ಬಯಸುತ್ತೇವೆ. ಈ ಪ್ರದೇಶದಲ್ಲಿ ಪ್ರಸ್ತುತ ಇರುವ ಪರಿಸ್ಥಿತಿಯ ಕುರಿತು ಚರ್ಚೆ ನಡೆಸಿದೆವು. ಶಾಶ್ವತ ಶಾಂತಿ ಖಚಿತಪಡಿಸುವ ಉದ್ದೇಶದ ಎಲ್ಲ ಪ್ರಯತ್ನಗಳಿಗೆ ಭಾರತ ನಿರಂತರ ಬೆಂಬಲ ನೀಡಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com