West Asia Conflict ಎಫೆಕ್ಟ್: ಗಗನಕ್ಕೇರುತ್ತಿದೆ ಜಾಗತಿಕ ತೈಲ ದರ, $100 ತಲುಪಿದ ಕಚ್ಚಾ ತೈಲ ಬೆಲೆ..!

ಗಲ್ಫ್ ಪ್ರದೇಶ ಹಾಗೂ ಜೋರ್ಡಾನ್‌ನಲ್ಲಿ ಅಮೆರಿಕದ ನೆಲೆಗಳು ಮತ್ತು ಇರಾನ್ ನಡುವೆ ದಾಳಿ-ಪ್ರತಿದಾಳಿಗಳು ತೀವ್ರಗೊಂಡಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ.
Crude Oil  (File photo)
ಕಚ್ಚಾ ತೈಲ ಸಾಂದರ್ಭಿಕ ಚಿತ್ರ
Updated on

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ (Crude Oil) ಬೆಲೆ ಭಾರಿ ಏರಿಕೆ ಕಾಣುತ್ತಿದ್ದು, ಪ್ರತಿ ಬ್ಯಾರೆಲ್‌ಗೆ $100 ರ ಗಡಿಗೆ ತಲುಪಿದೆ.

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಮಿಲಿಟರಿ ಉದ್ವಿಗ್ನತೆಯಿಂದಾಗಿ ಸತತ ನಾಲ್ಕನೇ ದಿನವೂ ತೈಲ ಬೆಲೆಗಳು ಗಗನಕ್ಕೇರಿದೆ.

ಇಂದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇಕಡಾ 1.6 ರಷ್ಟು ಏರಿಕೆಯಾಗಿ ಬ್ಯಾರೆಲ್‌ಗೆ $99.49 ಕ್ಕೆ ತಲುಪಿದ್ದರೆ, ಯುಎಸ್ ಡಬ್ಲ್ಯೂಟಿಐ (WTI) ಕಚ್ಚಾ ತೈಲದ ಬೆಲೆ $94.66 ಕ್ಕೆ ಏರಿಕೆಯಾಗಿದೆ. ಇದು ಕಳೆದ ಎರಡು ತಿಂಗಳಲ್ಲೇ ಅತ್ಯಂತ ಗರಿಷ್ಠ ಮಟ್ಟವಾಗಿದೆ.

ಗಲ್ಫ್ ಪ್ರದೇಶ ಹಾಗೂ ಜೋರ್ಡಾನ್‌ನಲ್ಲಿ ಅಮೆರಿಕದ ನೆಲೆಗಳು ಮತ್ತು ಇರಾನ್ ನಡುವೆ ದಾಳಿ-ಪ್ರತಿದಾಳಿಗಳು ತೀವ್ರಗೊಂಡಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ.

ತೈಲ ಸಾಗಣೆಯ ಪ್ರಮುಖ ಮಾರ್ಗವಾದ 'ಸ್ಟ್ರೈಟ್ ಆಫ್ ಹಾರ್ಮುಜ್' ಮೂಲಕ ತೈಲ ಪೂರೈಕೆ ತೀವ್ರವಾಗಿ ನಿಧಾನಗೊಂಡಿದೆ. ಪರ್ಯಾಯ ಮಾರ್ಗಗಳಿದ್ದರೂ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ತೀವ್ರ ಕೊರತೆ ಎದುರಾಗಿದೆ.

ತೈಲ ಬೆಲೆ ಏರಿಕೆಯಿಂದಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯಾಗುವ (ಹಣದುಬ್ಬರ) ಭೀತಿ ಎದುರಾಗಿದೆ.

Crude Oil  (File photo)
US-Iran ಸಂಘರ್ಷ ತಾರಕಕ್ಕೆ: ತೈಲ ಟ್ಯಾಂಕರ್ ದಾಳಿಗೆ Tehran ಪ್ರತಿಕಾರ; ಜೋರ್ಡಾನ್‌ ಅಮೆರಿಕ ಸೇನಾ ನೆಲೆ ಮೇಲೆ ಭೀಕರ ಕ್ಷಿಪಣಿ ದಾಳಿ, Hormuz ಬಿಕ್ಕಟ್ಟು ಮತ್ತಷ್ಟು ಉಲ್ಬಣ..!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com