ಅಮೆರಿಕಾ ಸುಂಕದ ಬೆದರಿಕೆಗೆ ಜಗ್ಗದ ಭಾರತ: 140 ಕೋಟಿ ಜನರ ಹಿತಾಸಕ್ತಿ ಮುಖ್ಯ, ಇಂಧನ ಭದ್ರತೆ ಕಾಪಾಡಲು ಅಗತ್ಯ ಕ್ರಮ ಎಂದ MEA

ತೈಲ ಮತ್ತು ಅನಿಲ ವಲಯದಲ್ಲಿ ರಷ್ಯಾದೊಂದಿಗೆ ವ್ಯಾಪಾರ ನಡೆಸುವ ಭಾರತ ಮತ್ತು ಚೀನಾ ಸೇರಿದಂತೆ ಇತರ ದೇಶಗಳ ಮೇಲೆ ಭಾರಿ ಸುಂಕ ವಿಧಿಸಲು ಈ ಕಾಯ್ದೆ ಅವಕಾಶ ನೀಡುತ್ತದೆ.
Trumps unpredictable behaviour
ಪ್ರಧಾನಿ ಮೋದಿ ಮತ್ತು ಡೊನಾಲ್ಡ್ ಟ್ರಂಪ್
Updated on

ನವದೆಹಲಿ: 140 ಕೋಟಿ ಜನರ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಬದ್ಧವಾಗಿದ್ದು, ವಿವಿಧ ಮೂಲಗಳಿಂದ ಇಂಧನ ಪೂರೈಕೆ ಪಡೆಯುವ ಮೂಲಕ ಇದನ್ನು ಮುಂದುವರಿಸಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಗುರುವಾರ ತಿಳಿಸಿದೆ.

ರಷ್ಯಾ ವಿರುದ್ಧ ನಿರ್ಬಂಧ ವಿಧಿಸಲು ಅಮೆರಿಕದ ಸಂಸತ್ತು ಕೈಗೊಂಡಿರುವ ಕ್ರಮದ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವಾಲಯ ಈ ಹೇಳಿಕೆ ನೀಡಿದೆ.

ರಷ್ಯಾ ಮತ್ತು ಇರಾನ್ ವಿರುದ್ಧ ನಿರ್ಬಂಧ ವಿಧಿಸುವ ಅಧಿಕಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೀಡುವ ‘ಲಿಂಡ್ಸೆ ಒ. ಗ್ರಹಾಂ ಸ್ಯಾಂಕ್ಷನಿಂಗ್ ರಷ್ಯಾ ಅಂಡ್ ಇರಾನ್ ಆ್ಯಕ್ಟ್’ ಅನ್ನು ಅಮೆರಿಕದ ಪ್ರತಿನಿಧಿಗಳ ಸಭೆ ಅಂಗೀಕರಿಸಿದೆ.

ತೈಲ ಮತ್ತು ಅನಿಲ ವಲಯದಲ್ಲಿ ರಷ್ಯಾದೊಂದಿಗೆ ವ್ಯಾಪಾರ ನಡೆಸುವ ಭಾರತ ಮತ್ತು ಚೀನಾ ಸೇರಿದಂತೆ ಇತರ ದೇಶಗಳ ಮೇಲೆ ಭಾರಿ ಸುಂಕ ವಿಧಿಸಲು ಈ ಕಾಯ್ದೆ ಅವಕಾಶ ನೀಡುತ್ತದೆ.

ಇದರ ಬೆನ್ನಲ್ಲೇ ಹೇಳಿಕೆ ನೀಡಿರುವ ವಿದೇಶಾಂಗ ಸಚಿವಾಲಯ, ಈ ಹಿಂದೆ ಹಲವು ಸಂದರ್ಭಗಳಲ್ಲಿ ತಿಳಿಸಿರುವಂತೆ, 140 ಕೋಟಿ ಜನರ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ದೃಢವಾಗಿ ಬದ್ಧವಾಗಿದೆ ಎಂದು ತಿಳಿಸಿದೆ.

“ವೈವಿಧ್ಯಮಯ ಮೂಲಗಳಿಂದ ಇಂಧನ ಪೂರೈಕೆ ಪಡೆಯುವ ಮೂಲಕ ಹಾಗೂ ಬದಲಾಗುತ್ತಿರುವ ಮಾರುಕಟ್ಟೆ ಪರಿಸ್ಥಿತಿಗಳಿಗೆ ಅನುಗುಣವಾಗಿ ಭಾರತ ಈ ಬದ್ಧತೆಯನ್ನು ಮುಂದುವರಿಸಲಿದೆ.

Trumps unpredictable behaviour
ಭಾರತ ಸೇರಿ ರಷ್ಯಾದ ಇತರ ವ್ಯಾಪಾರ ಪಾಲುದಾರ ದೇಶಗಳ ಮೇಲೆ ಶೇ.100 ಸುಂಕ: ಮಸೂದೆಗೆ ಅಮೆರಿಕ ಸಂಸತ್ತು ಅನುಮೋದನೆ

ಈ ವಿಚಾರವನ್ನು ಇತ್ತೀಚಿನ ತಿಂಗಳುಗಳಲ್ಲಿ ವಿವಿಧ ಅಮೆರಿಕದ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದಲ್ಲಿ ಚರ್ಚಿಸಲಾಗಿದೆ ಎಂದು ಎಂಇಎ ತಿಳಿಸಿದೆ.

“ದ್ವಿಪಕ್ಷೀಯ ಸಂಬಂಧ ಮಾತ್ರವಲ್ಲದೆ, ಅಂತಾರಾಷ್ಟ್ರೀಯ ಇಂಧನ ಮಾರುಕಟ್ಟೆಯ ಮೇಲೂ ಈ ಬೆಳವಣಿಗೆಗಳಿಂದ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಭಾರತದ ನಿಲುವನ್ನು ಅಮೆರಿಕದ ಅಧಿಕಾರಿಗಳಿಗೆ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ದೇಶದ ವ್ಯಾಪಾರ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವ ತನ್ನ ದೃಢನಿರ್ಧಾರವನ್ನೂ ಭಾರತ ಅಮೆರಿಕದ ಗಮನಕ್ಕೆ ತಂದಿದೆ ಎಂದು ತಿಳಿಸಿದೆ.

ಈ ಬೆಳವಣಿಗೆಗಳಿಂದ ಉಂಟಾಗುವ ಪರಿಣಾಮಗಳನ್ನು ಎದುರಿಸಲು ಸರ್ಕಾರವು ಭಾರತೀಯ ವ್ಯಾಪಾರ ಮತ್ತು ಕೈಗಾರಿಕಾ ಸಂಸ್ಥೆಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲಿದೆ” ಎಂದು ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com