ಓಮನ್ ನಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ಸಾವು!

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಬುಧವಾರ ಮಾಹಿತಿ ಹಂಚಿಕೊಂಡಿದೆ.
Image used for representational purposes only
ಸಾಂದರ್ಭಿಕ ಚಿತ್ರ
Updated on

ಮಸ್ಕತ್: ಓಮನ್ ನಲ್ಲಿ ಭಾರತಕ್ಕೆ ಪ್ರಯಾಣಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ಮತ್ತೆ ದಾಳಿ ನಡೆದಿದೆ. ಎಂವಿ ಕೇಪ್ ಡಾವೊ' (MV Cape Dao) ಎಂಬ ವಾಣಿಜ್ಯ ಹಡಗಿನ ಮೇಲಿನ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಬುಧವಾರ ಮಾಹಿತಿ ಹಂಚಿಕೊಂಡಿದೆ.

ಈ ದಾಳಿಯ ಕುರಿತು ನಿಗಾ ವಹಿಸುತ್ತಿದ್ದು, 19 ಭಾರತೀಯ ಪ್ರಜೆಗಳು ಸೇರಿದಂತೆ ಹಡಗಿನಲ್ಲಿದ್ದ ಸಿಬ್ಬಂದಿಯ ಸುರಕ್ಷತೆಯ ವಿಷಯದಲ್ಲಿ ಓಮನ್‌ನ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿರುವುದಾಗಿ ರಾಯಭಾರ ಕಚೇರಿ ಹೇಳಿದೆ.

Image used for representational purposes only
ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ, 3 ಭಾರತೀಯರು ನಾಪತ್ತೆ: ಅಮೆರಿಕದ ರಾಜತಾಂತ್ರಿಕರಿಗೆ ಭಾರತ ಸಮನ್ಸ್

ಈ ದಾಳಿಯಲ್ಲಿ ಒಬ್ಬ ಭಾರತೀಯ ಪ್ರಜೆ ಮೃತಪಟ್ಟಿರುವುದು ನಮಗೆ ತೀವ್ರ ದುಃಖವನ್ನು ತಂದಿದೆ. ಮೃತರ ಕುಟುಂಬಕ್ಕೆ ನಮ್ಮ ಸಂತಾಪಗಳು," ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಹಡಗಿನ ಮೇಲೆ ದಾಳಿ ನಡೆಸಿದವರು ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ತಾವು ಆರ್‌ಪಿಎಸ್‌ಎಲ್ (RPSL) ಜೊತೆ ಸಮನ್ವಯ ಸಾಧಿಸುತ್ತಿದ್ದು, ಮೃತರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ರಾಯಭಾರ ಕಚೇರಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com