ಪಾಕಿಸ್ತಾನದಲ್ಲಿ SCO ಸಭೆ ಆರಂಭ; ಭಾರತ ಭಾಗಿ, 2027ರ ಶೃಂಗಸಭೆಗೆ ಸಿದ್ಧತೆ!

SCO ಸದಸ್ಯ ರಾಷ್ಟ್ರಗಳಾದ ರಷ್ಯಾ, ಭಾರತ, ಇರಾನ್, ಕಜಕಿಸ್ತಾನ, ಕಿರ್ಗಿಸ್ತಾನ, ಪಾಕಿಸ್ತಾನ, ತಜಿಕಿಸ್ತಾನ, ಉಜ್ಬೇಕಿಸ್ತಾನ, ಬೆಲಾರಸ್ ಮತ್ತು ಚೀನಾ ಸಭೆಯಲ್ಲಿ ಭಾಗವಹಿಸುತ್ತಿವೆ.
SCO national coordinators meet begins in Pakistan
ಇಸ್ಲಾಮಾಬಾದ್ ನಲ್ಲಿ ಶಾಂಘೈ ಸಹಕಾರ ಸಂಘಟನೆ ಸಭೆ
Updated on: 

ಇಸ್ಲಾಮಾಬಾದ್: ಶಾಂಘೈ ಸಹಕಾರ ಸಂಘಟನೆ (SCO)ಯ ರಾಷ್ಟ್ರೀಯ ಸಂಯೋಜಕರ ಮೂರು ದಿನಗಳ ಸಭೆ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಸೋಮವಾರ ಆರಂಭವಾಗಿದ್ದು, ಅಚ್ಚರಿ ಬೆಳವಣಿಗೆಯಲ್ಲಿ ಭಾರತದ ಪ್ರತಿನಿಧಿಗಳು ಕೂಡ ಭಾಗಿಯಾಗಿದ್ದಾರೆ.

ಮುಂದಿನ ವರ್ಷ ನಡೆಯಲಿರುವ SCO ಸದಸ್ಯ ರಾಷ್ಟ್ರಗಳ ಮುಖ್ಯಸ್ಥರ ಶೃಂಗಸಭೆಯ ಸಿದ್ಧತೆಗಾಗಿ ನಡೆಯುತ್ತಿರುವ ಈ ಸಭೆಯಲ್ಲಿ ಭಾರತವೂ ಭಾಗವಹಿಸಿದೆ. SCOಯ ಪ್ರಮುಖ ಸದಸ್ಯ ರಾಷ್ಟ್ರವಾಗಿರುವ ಭಾರತದ ನಿಯೋಗಕ್ಕೆ ರಾಷ್ಟ್ರೀಯ ಸಂಯೋಜಕ ಅಲೋಕ್ ದಿಮ್ರಿ ನೇತೃತ್ವ ವಹಿಸಿದ್ದಾರೆ.

SCO ಸದಸ್ಯ ರಾಷ್ಟ್ರಗಳಾದ ರಷ್ಯಾ, ಭಾರತ, ಇರಾನ್, ಕಜಕಿಸ್ತಾನ, ಕಿರ್ಗಿಸ್ತಾನ, ಪಾಕಿಸ್ತಾನ, ತಜಿಕಿಸ್ತಾನ, ಉಜ್ಬೇಕಿಸ್ತಾನ, ಬೆಲಾರಸ್ ಮತ್ತು ಚೀನಾ ಸಭೆಯಲ್ಲಿ ಭಾಗವಹಿಸುತ್ತಿವೆ.

ಪಾಕಿಸ್ತಾನದ ರಾಷ್ಟ್ರೀಯ ಸಂಯೋಜಕ ಮೊಹಮ್ಮದ್ ಫೈಸಲ್ ಸಭೆಯ ಚರ್ಚೆಗಳಿಗೆ ಅಧ್ಯಕ್ಷತೆ ವಹಿಸುತ್ತಿದ್ದಾರೆ. SCO ಸದಸ್ಯ ರಾಷ್ಟ್ರಗಳ ನಡುವಿನ ಸಹಕಾರ ಮತ್ತು ಸಮನ್ವಯವನ್ನು ಮತ್ತಷ್ಟು ಬಲಪಡಿಸುವುದು ಹಾಗೂ 2027ರ ಆಗಸ್ಟ್‌ನಲ್ಲಿ ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ SCO ರಾಷ್ಟ್ರಗಳ ಮುಖ್ಯಸ್ಥರ ಶೃಂಗಸಭೆಯ ಸಿದ್ಧತೆಗಳು ಸಭೆಯ ಪ್ರಮುಖ ಉದ್ದೇಶಗಳಾಗಿವೆ.

SCO national coordinators meet begins in Pakistan
ಎಲ್ಲ ವ್ಯವಸ್ಥೆಗಳೂ ನಮ್ಮ ನಿಯಂತ್ರಣದಲ್ಲಿವೆ: ಇರಾನ್ ಡ್ರೋನ್ ಸೆರೆ ಹೇಳಿಕೆಗೆ ಅಮೆರಿಕಾ ಕೌಂಟರ್..!

ಸಂಘರ್ಷದ ಬಳಿಕ ಮೊದಲ ಭಾರತೀಯ ನಿಯೋಗ ಭೇಟಿ

ಕಳೆದ ವರ್ಷದ ಭಾರತ-ಪಾಕಿಸ್ತಾನ ನಡುವಿನ ಸಂಕ್ಷಿಪ್ತ ಸಂಘರ್ಷದ ಬಳಿಕ ಭಾರತೀಯ ನಿಯೋಗ ಇಸ್ಲಾಮಾಬಾದ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿಯಾಗಿದೆ.

ಇದಕ್ಕೂ ಮೊದಲು ವಿದೇಶಾಂಗ ಸಚಿವ ಎಸ್. ಜೈಶಂಕರ್ ನೇತೃತ್ವದ ಭಾರತೀಯ ನಿಯೋಗ 2024ರ ಅಕ್ಟೋಬರ್ 15 ಮತ್ತು 16ರಂದು SCO ಸದಸ್ಯ ರಾಷ್ಟ್ರಗಳ ಸರ್ಕಾರದ ಮುಖ್ಯಸ್ಥರ ಸಭೆಯಲ್ಲಿ ಭಾಗವಹಿಸಲು ಇಸ್ಲಾಮಾಬಾದ್‌ಗೆ ತೆರಳಿತ್ತು.

ಸಹಕಾರದ ಹಲವು ವಿಚಾರಗಳ ಚರ್ಚೆ

ಸೆಪ್ಟೆಂಬರ್ 28ರಿಂದ 30ರವರೆಗೆ ನಡೆಯಲಿರುವ ಸಭೆಯಲ್ಲಿ SCO ಸಹಕಾರ ಮತ್ತು ಸಮನ್ವಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಾಕಿಸ್ತಾನದ ಅಧ್ಯಕ್ಷತೆಯ ಅವಧಿಯ ಕಾರ್ಯಕ್ರಮಗಳು, ಮುಂಬರುವ SCO ಸಭೆಗಳು ಮತ್ತು ಕಾರ್ಯಕ್ರಮಗಳ ಸಿದ್ಧತೆ ಹಾಗೂ ಸಂಘಟನೆಯ ಕಾರ್ಯಸೂಚಿಗೆ ಸಂಬಂಧಿಸಿದ ಇತರ ವಿಚಾರಗಳು ಸಭೆಯಲ್ಲಿ ಚರ್ಚೆಯಾಗಲಿವೆ.

2027ರ ಆಗಸ್ಟ್‌ನಲ್ಲಿ ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ SCO ರಾಷ್ಟ್ರಗಳ ಮುಖ್ಯಸ್ಥರ ಶೃಂಗಸಭೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಈ ಸಭೆ ಮಹತ್ವ ಪಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com