ಭಾರತ-ಆಸಿಯಾನ್ ಸಹಕಾರ ಬಲಪಡಿಸಲು 12 ಅಂಶಗಳ ಪ್ರಸ್ತಾವನೆ ಮಂಡಿಸಿದ ಪ್ರಧಾನಿ ಮೋದಿಡಿಜಿಟಲ್ ಪರಿವರ್ತನೆ, ವ್ಯಾಪಾರ ಮತ್ತು ಆರ್ಥಿಕ ತೊಡಗಿಸಿಕೊಳ್ಳುವಿಕೆಯಂತಹ ಕ್ಷೇತ್ರಗಳಲ್ಲಿ ಭಾರತ-ಆಸಿಯಾನ್ ಸಹಕಾರವನ್ನು ಬಲಪಡಿಸುವ 12 ಅಂಶಗಳ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಂಡಿಸಿದರು.
'ಭಾರತ್' ಹೆಸರಿನ ವಿವಾದ: ಮರುನಾಮಕರಣಕ್ಕೆ ಮನವಿ ಬಂದರೆ ಪರಿಗಣಿಸುತ್ತೇವೆ- ವಿಶ್ವಸಂಸ್ಥೆ ವಕ್ತಾರಇಂಡಿಯಾವನ್ನು ಭಾರತ್ ಎಂದು ಮರು ನಾಮಕರಣ ಮಾಡುವ ಕುರಿತು ದೇಶಾದ್ಯಂತ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ, ಹೆಸರು ಬದಲಾವಣೆಗೆ ರಾಷ್ಟ್ರಗಳಿಂದ ಮನವಿ ಬಂದರೆ ಅದನ್ನು ಪರಿಗಣಿಸಲಾಗುತ್ತದೆ ಎಂದು ವಿಶ್ವಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಜಕಾರ್ತ: ನಿಯಮಾಧಾರಿತ ವಿಶ್ವ ಕ್ರಮವನ್ನು ನಿರ್ಮಿಸಲು ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಕರೆಜಾಗತಿಕ ಬೆಳವಣಿಗೆಯಲ್ಲಿ ಆಸಿಯಾನ್ ರಾಷ್ಟ್ರಗಳ ಪಾತ್ರ ಮಹತ್ವದ್ದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂಡೋನೇಷ್ಯಾದ ಜಕಾರ್ತದಲ್ಲಿ ಗುರುವಾರ ಆಸಿಯಾನ್- ಭಾರತ ಶೃಂಗಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಭಾರತ ಆಯೋಜನೆಯ ಜಿ-20 ಶೃಂಗಸಭೆ ಯಶಸ್ಸಿಗೆ ಎಲ್ಲಾ ರಾಷ್ಟ್ರಗಳೊಂದಿಗೆ ಶ್ರಮಿಸಲು ಸಿದ್ಧ: ಚೀನಾಈ ಬಾರಿ ಜಿ 20 ಶೃಂಗಸಭೆ ಆಯೋಜಿಸುತ್ತಿರುವ ಭಾರತವನ್ನು ಬೆಂಬಲಿಸುವುದಾಗಿ ಚೀನಾ ಮಂಗಳವಾರ ಹೇಳಿದೆ. ನವದೆಹಲಿಯಲ್ಲಿ ಈ ವಾರದಿಂದ ನಡೆಯಲಿರುವ ಉನ್ನತ ಮಟ್ಟದ ಜಾಗತಿಕ ಸಮ್ಮೇಳನದ ಯಶಸ್ಸಿಗಾಗಿ ಎಲ್ಲಾ ರಾಷ್ಟ್ರಗಳೊಂದಿಗೆ ಶ್ರಮಿಸಲು ಸಿದ್ಧವಾಗಿರುವುದಾಗಿ ತಿಳಿಸಿದೆ.
ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಗೆ ಕೋವಿಡ್ ಪಾಸಿಟಿವ್, ಅಧ್ಯಕ್ಷ ಜೊ ಬೈಡನ್ ಗೆ ನೆಗೆಟಿವ್ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಅವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ಶ್ವೇತಭವನ ತಿಳಿಸಿದೆ. ಆದರೆ ಅಧ್ಯಕ್ಷ ಜೊ ಬೈಡನ್ ಅವರಿಗೆ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ.
ಬಲೂಚಿಸ್ತಾನದಲ್ಲಿ ಪಾಕ್ ನೌಕಾಪಡೆ ಹೆಲಿಕಾಪ್ಟರ್ ಪತನ; ಇಬ್ಬರು ಅಧಿಕಾರಿಗಳು ಸೇರಿ ಮೂವರು ಸಾವುಪಾಕಿಸ್ತಾನ ನೌಕಾಪಡೆಯ ಹೆಲಿಕಾಪ್ಟರ್ ಸೋಮವಾರ ತರಬೇತಿ ಹಾರಾಟದ ವೇಳೆ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪತನಗೊಂಡಿದ್ದು, ಇಬ್ಬರು ಅಧಿಕಾರಿಗಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.
ಈಗ ಅಧಿಕೃತ: ದೆಹಲಿ G20 ಗೆ ಕ್ಸಿ ಜಿನ್ಪಿಂಗ್ ಗೈರು; ಚೀನಾ ಸರ್ಕಾರ ಮಾಹಿತಿಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಈ ವಾರ ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ ಮತ್ತು ಚೀನಾ ನಿಯೋಗದ ನೇತೃತ್ವವನ್ನು ಪ್ರಧಾನಿ ಲಿ ಕಿಯಾಂಗ್ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಲಾಗಿದೆ.
ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಷಣ್ಮುಗರತ್ನಂ ಆಯ್ಕೆಭಾರತೀಯ ಮೂಲದ ಸಿಂಗಾಪುರದ ಅರ್ಥಶಾಸ್ತ್ರಜ್ಞ ಥರ್ಮನ್ ಷಣ್ಮುಗರತ್ನಂ ಅವರು ಶುಕ್ರವಾರ ಸಿಂಗಾಪುರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಪಾಕಿಸ್ತಾನದ ಪಂಜಾಬ್ ನಲ್ಲಿ ಭರ್ಜರಿ ಕಾರ್ಯಾಚರಣೆ: 5 ಮಹಿಳಾ ಐಸಿಸ್ ಉಗ್ರರ ಬಂಧನಪಾಕಿಸ್ತಾನದ ಪಂಜಾಬ್ ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಸ್ಲಾಮಿಕ್ ಸ್ಟೇಟ್ ನ ಐದು ಮಹಿಳಾ ಉಗ್ರರನ್ನು ಬಂಧಿಸಿದ್ದಾರೆ.
ದಕ್ಷಿಣ ಆಫ್ರಿಕಾ: 5 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, 63 ಮಂದಿ ದುರ್ಮರಣಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸಂಭವಿಸಿದ ಕನಿಷ್ಠ 63 ಮಂದಿ ಮೃತಪಟ್ಟಿದ್ದು 43 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಆಫ್ರಿಕಾದ ಮಧ್ಯ ಜೋಹಾನ್ಸ್ಬರ್ಗ್ನಲ್ಲಿ ಸಂಭವಿಸಿದೆ.
ಹೊಸ ನಕ್ಷೆ ಸಮರ್ಥಿಸಿಕೊಂಡ ಚೀನಾ: 'ಅತಿರೇಕದ ವ್ಯಾಖ್ಯಾನ ಬೇಡ' ಎಂದು ಭಾರತಕ್ಕೆ ಸಲಹೆಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಪ್ರದೇಶ ತನ್ನ ಭೂಭಾಗ ಎಂದು ತೋರಿಸುವ ಹೊಸ ನಕ್ಷೆ ಬಿಡುಗಡೆ ಮಾಡಿದ ತನ್ನ ಕ್ರಮವನ್ನು ಚೀನಾ ಬುಧವಾರ ಸಮರ್ಥಿಸಿಕೊಂಡಿದೆ.
ವಿಶ್ವದ ಮೊದಲ ಪ್ರಕರಣ: ಮಹಿಳೆ ಮೆದುಳಿನಲ್ಲಿ ಜೀವಂತ ಹುಳು ಹೊರತೆಗೆದ ವೈದ್ಯರು!ಖಿನ್ನತೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರ ಮೆದುಳಿನಲ್ಲಿ ಜೀವಂತ ಹುಳು ಹೊರತೆಗೆದಿರುವ ಘಟನೆ ಆಸ್ಟ್ರೇಲಿಯಾದಲ್ಲಿ ವರದಿಯಾಗಿದೆ.
ಶಿಕ್ಷೆ ಅಮಾನತ್ತಾದರೂ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ: ಕಾನೂನು ತಜ್ಞರುಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಕಾನೂನು ತಂಡವು ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಕಾರಣವಾದ ಆಗಸ್ಟ್ 5ರ ತೀರ್ಪನ್ನು ಅಮಾನತುಗೊಳಿಸುವಂತೆ ವಿನಂತಿಸದೆ ಮಹತ್ವದ ತಪ್ಪು ಮಾಡಿದೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಇಸ್ಲಾಮಾಬಾದ್ ಹೈಕೋರ್ಟ್ ಜಾಮೀನುಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಿಡುಗಡೆ ಮಾಡುವಂತೆ ಮಂಗಳವಾರ ಆದೇಶಿಸಿರುವ ಇಸ್ಲಾಮಾಬಾದ್ ಹೈಕೋರ್ಟ್ ಆಗಸ್ಟ್ 5 ರಂದು ವಿಚಾರಣಾ ನ್ಯಾಯಾಲಯ ನೀಡಿದ್ದ ಹಿಂದಿನ ತೀರ್ಪನ್ನು ಅಮಾನತುಗೊಳಿಸಿದೆ.
ಚೀನಾದಿಂದ ಮತ್ತೆ ವಕ್ರ ಬುದ್ಧಿ: 'ಸ್ಟ್ಯಾಂಡರ್ಡ್ ಮ್ಯಾಪ್'ನಲ್ಲಿ ಭಾರತದ ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಸೇರ್ಪಡೆಕಳೆದ ವಾರವಷ್ಟೇ ದಕ್ಷಿಣ ಆಫ್ರಿಕಾದ ಜೊಹಾನ್ಸ್ ಬರ್ಗ್ ನಲ್ಲಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿ ಕೈಕುಲಿಕಿದ್ದ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮತ್ತೆ ತಮ್ಮ ವಕ್ರಬುದ್ಧಿ ತೋರಿಸಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ