ಅಮೆರಿಕಾದಲ್ಲಿ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 2,502 ಮಂದಿ ಬಲಿ
ಅಮೆರಿಕಾದಲ್ಲಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಪ್ರತೀನಿತ್ಯ ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪುತ್ತಿದ್ದಾರೆ. ಇದರಂತೆ ಕಳೆದ 24 ಗಂಟೆಗಳಲ್ಲಿ 2,502 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.


